ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ, ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
- ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ, ಸಚಿವ ಸಂಪುಟ ಅಸ್ತು
- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆಗೆ ಅನುಮೋದನೆ
- ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ, ಸಿಹಿ ಹಂಚಿ ಸಂಭ್ರಮ
ಬೆಂಗಳೂರು (Bengaluru): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ (Dharwad) ಮಹಾನಗರ ಪಾಲಿಕೆಯನ್ನು ರಚಿಸಲು ರಾಜ್ಯ ಸಚಿವ ಸಂಪುಟವು ಗುರುವಾರ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ, ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಸ್ತುತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇರುವ ವಾರ್ಡ್ ನಂ.1 ರಿಂದ 26 ವರೆಗಿನ ಪ್ರದೇಶಗಳನ್ನು ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಗೆ ಸೇರಿಸಲಾಗುತ್ತದೆ. ಉಳಿದ ವಾರ್ಡ್ ನಂ.27 ರಿಂದ 82 ವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಸೇರಿಸಲು ಅನುಮತಿ ನೀಡಲಾಗಿದೆ.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಣೆಯಾಗಿರುವುದಕ್ಕೆ ಧಾರವಾಡದ ಜನರು ಸಂಭ್ರಮಿಸಿ, ಪಟಾಕಿ ಸಿಡಿಸಿ ಮತ್ತು ಸಿಹಿ ಹಂಚಿಕೊಂಡರು. 2014ರಿಂದಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಲು ಆಗ್ರಹಿಸಲಾಗಿತ್ತು, ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿದ ಹಿನ್ನೆಲೆಯಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಗೆ ಬೇಡಿಕೆ ವ್ಯಕ್ತವಾಗಿತ್ತು.
Dharwad Declared Separate Municipal Corporation