ಹೊಸ ರೇಷನ್ ಕಾರ್ಡ್ ವಿತರಣೆಗೆ ಸಿದ್ಧತೆ! ಜೊತೆಗೆ ಇಂತವರ ರೇಷನ್ ಕಾರ್ಡ್ ರದ್ದುಗೊಳಿಸುವ ನಿರ್ಧಾರ

ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಜನರಿಗೆ ಕೆಲವು ಮಾನದಂಡಗಳನ್ನು ಪರಿಶೀಲಿಸಿ ಬಿಪಿಎಲ್ ಕಾರ್ಡ್ (BPL Card) ವಿತರಣೆ ಮಾಡಲಾಗುತ್ತಿದೆ.

Bengaluru, Karnataka, India
Edited By: Satish Raj Goravigere

New Ration Card : ಬಡತನ ರೇಖೆಗಿಂತ ಕಡಿಮೆ ಇರುವ ಜನರು ಹಾಗೆ ಆರ್ಥಿಕವಾಗಿ ಹಿಂದುಳಿದ ಜನರ ಹಸಿವನ್ನು ನೀಗಿಸಲು ಹಾಗೆ ಅವರಿಗೆ ಕೆಲವು ಯೋಜನೆಗಳ ಮೂಲಕ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.

ಇನ್ನು ಇಂತಹ ಜನರಿಗೆ ಬಿಪಿಎಲ್ ಕಾರ್ಡ್ (BPL Card) ವಿತರಿಸುವ ಮೂಲಕ ಅವರ ನೆರವಿಗೆ ನಿಂತಿದೆ ಎಂದರೆ ತಪಾಗುವುದಿಲ್ಲ. ಬಡ ಜನರಿಗೆ ಬಿಪಿಎಲ್ ಕಾರ್ಡ್ ಒಂದು ರೀತಿಯಲ್ಲಿ ಅದೃಷ್ಟದ ಕಾರ್ಡ್ ಎಂದರೆ ತಪ್ಪಾಗುವುದಿಲ್ಲ.

distribution of new ration card, Also the decision to cancel ration cards

ಇದೀಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡ ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಸಲುವಾಗಿ ದೇಶದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇನ್ನು ಈ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ (BPL Card) ಬಹಳ ಮುಖ್ಯವಾದ ದಾಖಲೆಯಾಗಿದೆ.

ಅನ್ನಭಾಗ್ಯ ಯೋಜನೆಯ 3 ತಿಂಗಳ ಪೆಂಡಿಂಗ್ ಹಣ ಒಟ್ಟಿಗೆ ಜಮಾ! ತಡವಾದ್ರೂ ಒಟ್ಟಿಗೆ ಡೆಪಾಸಿಟ್

ಹೌದು, ಇತ್ತೀಚೆಗೆ ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಿಪಿಎಲ್ ಕಾರ್ಡ್ (BPL Card) ಬಹು ಮುಖ್ಯವಾದ ದಾಖಲೆಗಳಲ್ಲಿ ಒಂದಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಜನರಿಗೆ ಕೆಲವು ಮಾನದಂಡಗಳನ್ನು ಪರಿಶೀಲಿಸಿ ಬಿಪಿಎಲ್ ಕಾರ್ಡ್ (BPL Card) ವಿತರಣೆ ಮಾಡಲಾಗುತ್ತಿದೆ.

ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಕಾರ್ (BPL Card) ಕಡ್ಡಾಯ, ಇನ್ನು ಇದೆ ಕಾರಣದಿಂದ ಇತ್ತೀಚೆಗೆ ಪಡಿತರ ಚೀಟಿ ಪಡೆದುಕೊಳ್ಳಲು ಹೊಸ ಅರ್ಜಿಗಳನ್ನು ಸಲ್ಲಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನು ಆಹಾರ ಇಲಾಖೆಯ ಮಾಹಿತಿಯ ಪ್ರಕಾರ ಈಗಾಗಲೇ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಪಡಿತರ ಚೀತು ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ಮುಂದೆ ಬಿ‌ಪಿ‌ಎಲ್ ರೇಷನ್ ಕಾರ್ಡ್ ಈ ಉದ್ಯೋಗದಲ್ಲಿದ್ದವರಿಗೆ ಸಿಗೋಲ್ಲ! ಪಟ್ಟಿ ಇಲ್ಲಿದೆ

Ration Cardಅನೇಕರು ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದೀಗ ಸರ್ಕಾರವೂ ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ. ಅನೇಕರು ಆರ್ಥಿಕವಾಗಿ ಸಬಲರಾಗಿದ್ದರೂ ಸರ್ಕಾರದಿಂದ ಪಡಿತರ ಚೀಟಿ ಪಡೆದುಕೊಂಡು ಬಡವರಿಗೆ ಬರುವ ಲಾಭಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಕೆಲವರು ವಯಸ್ಸಾದ ಸದಸ್ಯರು ಮೃತ ಪಟ್ಟಿದ್ದರೂ ಸಹ ಪಡಿತರ ಚೀಟಿಯಲ್ಲಿ ಅವರ ಹೆಸರನ್ನು ಅಳಿಸದೆ, ಅವರ ಹೆಸರಿನಲ್ಲಿ ಲಾಭ ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರದಿಂದ ಸಿಗುವ ಕೆಲವು ಲಾಭಗಳನ್ನು ಪಡೆದುಕೊಳ್ಳುವ ಸಲುವಾಗಿ ಅನೇಕರು ನಕಲಿ ದಾಖಲೆಗಳನ್ನು ನೀಡುವ ಮೂಲಕ ರೇಷನ್ ಕಾರ್ಡ್ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ ಸರ್ಕಾರಿ ನೌಕರರು ಹಾಗೂ ಆರ್ಥಿಕವಾಗಿ ಸಬಲವಾಗಿರುವವರು ಸಹ ಇದೀಗ ಬಿಪಿಎಲ್ ಕಾರ್ಡ್ ಪಡೆದುಕೊಂಡು, ಸರ್ಕಾರದ ಲಾಭಗಳನ್ನು ಅನುಭವಿಸುತ್ತಿದ್ದಾರೆ.

ಗೃಹಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ!

ಇನ್ನು ಮೂರು ತಿಂಗಳು ಪಡಿತರ ಪಡೆಯದೆ ಇದ್ದ ಸದಸ್ಯರ ಪಡಿತರ ಚೀಟಿಯನ್ನು ರದ್ದು ಮಾಡಲು ಇದೀಗ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಇಂತಹ ವಂಚನೆಗಳನ್ನು ತಲೆ ತಡೆಯುವ ಸಲುವಾಗಿ ಇದೀಗ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಣೆಯನ್ನು ಸದ್ಯ ನಿಲ್ಲಿಸಿದೆ. ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

distribution of new ration card, Also the decision to cancel ration cards