ಬೆಂಗಳೂರು ಗ್ರಾಮಾಂತರ: ಮೊಬೈಲ್ ಆ್ಯಪ್ ಬಳಸಿ, ಬೆಳೆ ವಿವರ ದಾಖಲಿಸಿ

ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2020ರ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲು ತೀರ್ಮಾನಿಸಲಾಗಿದ್ದು, ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಎಂಬ ಆ್ಯಪ್‌ನಲ್ಲಿ ದಾಖಲಿಸಬಹುದಾಗಿದೆ.

(Kannada News) : ಬೆಂಗಳೂರು ಗ್ರಾಮಾಂತರ: ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2020ರ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲು ತೀರ್ಮಾನಿಸಲಾಗಿದ್ದು, ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಎಂಬ ಆ್ಯಪ್‌ನಲ್ಲಿ ದಾಖಲಿಸಬಹುದಾಗಿದೆ.

ರೈತರು ಪ್ಲೇ ಸ್ಟೋರ್‌ನಲ್ಲಿ Rabi Season Farmer App 2020-21 , ಡೌನ್‌ಲೋಡ್ ಮಾಡಿಕೊಂಡು ಸ್ವತಃ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ.

ಬೆಳೆ ಸಮೀಕ್ಷೆಯ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯು ಮೇಲ್ವಿಚಾರಕರ ಮೂಲಕ ಅನುಮೋದನೆ ಪಡೆದ ನಂತರ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ.

ಈ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿ ಆರ್ಥಿಕ ವರ್ಗ ಮತ್ತು ಋತುವನ್ನು ದಾಖಲಿಸಬೇಕು ಅನಂತರ ಆಧಾರ್ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ರೈತರ ಮೊಬೈಲ್ ಸಂಖ್ಯೆಗೆ ಬರುವ ಒ.ಟಿ.ಪಿ. ಅನ್ನು ದಾಖಲಿಸಬೇಕು.

ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ರೈತರ ಮಾಲೀಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್ ಗಳ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಪೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.

ಈ ಪ್ರಕ್ರಿಯೆಗೆ ಡಿಸೆಂಬರ್ ಅಂತ್ಯದವರೆಗೂ ಕಾಲಾವಕಾಶ ಕಲ್ಪಿಸಲಾಗಿದ್ದು, ರೈತರು ಸ್ವತಃ ತಮ್ಮ ಬೆಳೆ ಮಾಹಿತಿ ಅಪ್‌ಲೋಡ್ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಾಡ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ಬೆಳೆ ಸಮೀಕ್ಷೆ ಸಹಾಯವಾಣಿ ಮೊ.ಸಂ 8448447715 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Web Title : enter crop details Using mobile app

Scroll Down To More News Today