ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ದೇವೇಗೌಡ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರು (Bengaluru): ಮಾಜಿ ಪ್ರಧಾನಿ ದೇವೇಗೌಡ (Farmer PM Deve Gowda) ಅವರು ಅನಾರೋಗ್ಯದ (medical check-up) ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು (hospitalised).
ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವು ಈಗಾಗಲೇ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ. ಹೀಗಿರುವಾಗ ಹಾಸನ ಕ್ಷೇತ್ರದಲ್ಲಿ ಪತ್ನಿ ಭವಾನಿ ಅವರಿಗೆ ಟಿಕೆಟ್ ನೀಡುವಂತೆ ರೇವಣ್ಣ ಕೇಳುತ್ತಿದ್ದಾರೆ.
ಇದಕ್ಕೆ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರೊಬ್ಬರಿಗೆ ಟಿಕೆಟ್ ನೀಡುತ್ತೇನೆ ಎಂದಿದ್ದಾರೆ. ಈ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ಮನಸ್ಥಾಪಗಳು ಉಂಟಾಗಿವೆ.
ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತು ತಮ್ಮ ಟ್ವಿಟ್ಟರ್ ಪೇಜ್ ನಲ್ಲಿ ಪೋಸ್ಟ್ ಮಾಡಿರುವ ಅವರು, ”ಸಾಮಾನ್ಯ ದೈಹಿಕ ಪರೀಕ್ಷೆಗೆಂದು ಖಾಸಗಿ ಆಸ್ಪತ್ರೆ ಸೇರಿದ್ದೇನೆ, ಈ ಪರೀಕ್ಷೆಗಳು ಮುಗಿದು ಒಂದೆರೆಡು ದಿನದಲ್ಲಿ ಮನೆಗೆ ಮರಳುತ್ತೇನೆ, ನನ್ನ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ.” ಎಂದಿದ್ದಾರೆ.
ಗೌಡರ ಆರೋಗ್ಯ ತಪಾಸಣೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, 89 ವರ್ಷ ವಯಸ್ಸಿನ ಜೆಡಿ (ಎಸ್) ನಾಯಕ ತೀವ್ರ ಮೊಣಕಾಲು ನೋವು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.
ಕೋವಿಡ್ ಮತ್ತು ಸಂಬಂಧಿತ ಕಾಯಿಲೆಗಳಿಗಾಗಿ ಕಳೆದ ವರ್ಷ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Farmer PM Deve Gowda hospitalised for routine medical check-up
Follow us On
Google News |
Advertisement