ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ, ಗ್ರಾಮಸ್ಥರಿಂದ ರಸ್ತೆ ತಡೆ
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೃಷ್ಣಪ್ಪ ಮೃತಪಟ್ಟಿದ್ದರು
ಬೆಂಗಳೂರು (Bengaluru): ಅಜಾಗರೂಕ ಟಿಪ್ಪರ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಸಮೀಪದ ಕುಪ್ಪಹಳ್ಳಿ ಮತ್ತು ಚದಲಾಪುರ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬೆಂಗಳೂರು-ಹೈದರಾಬಾದ್ (Bengaluru-Hyderabad) ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಚದಲಾಪುರ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೃಷ್ಣಪ್ಪ ಎಂಬ 60 ವರ್ಷದ ವ್ಯಕ್ತಿ ಮೃತಪಟ್ಟ ಘಟನೆ ಪ್ರತಿಭಟನೆಗೆ ಕಾರಣವಾಗಿತ್ತು.
ಘಟನೆಯಲ್ಲಿ ಆತನ ಮೋಟಾರ್ ಸೈಕಲ್ 100 ಮೀಟರ್ ಗೂ ಹೆಚ್ಚು ದೂರ ಎಳೆದಾಡಿದೆ. ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಟಿಪ್ಪರ್‌ಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಶಾಸಕ ಈಶ್ವರ್ ಪ್ರದೀಪ್ (MLA Pradeep eshwar) ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಟಿಪ್ಪರ್ ಕಾರ್ಯಾಚರಣೆಗೆ ಕಠಿಣ ನಿಯಮಾವಳಿ ಹಾಗೂ ಅಕ್ರಮ ಕ್ರಷರ್‌ಗಳಿಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.
Fatal accident on Bengaluru-Hyderabad highway, villagers block road