ಬೆಂಗಳೂರಿನ ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ ಮೂರು ಬೋಗಿಗಳಿಗೆ ಬೆಂಕಿ

ಬೆಂಗಳೂರಿನ ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಮಾಕ್ ಡ್ರಿಲ್‌ಗೆ ಬಳಸುತ್ತಿದ್ದ ಮೂರು ಬೋಗಿಗಳಿಗೆ ಬೆಂಕಿ ತಗುಲಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ವರದಿಯಾಗಿಲ್ಲ

  • ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ ಬೆಂಕಿ ಅವಘಡ
  • ಮೂರು ರೈಲು ಬೋಗಿಗಳಿಗೆ ಬೆಂಕಿ, ಎರಡು ಬೋಗಿಗಳಿಗೆ ತೀವ್ರ ಹಾನಿ
  • ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ

ಬೆಂಗಳೂರು (Bengaluru): ನಗರದ ಹೊರವಲಯದ ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ (Rajanukunte Fire Accident) ನಿಲ್ಲಿಸಲಾಗಿದ್ದ ಮೂರು ರೈಲು ಬೋಗಿಗಳಿಗೆ ಬೆಂಕಿ ತಗುಲಿದ್ದು, ಎರಡು ಬೋಗಿಗಳಿಗೆ ತೀವ್ರ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಇಂದಿನಿಂದ 108 ಅಂಬುಲೆನ್ಸ್ ಸಿಬ್ಬಂದಿಯಿಂದ ಮುಷ್ಕರಕ್ಕೆ ಕರೆ, ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬೋಗಿಗಳನ್ನು ರೈಲ್ವೆ ಇಲಾಖೆಯ ಅಣಕು ಅಗ್ನಿ ಅವಘಡ ಕಾರ್ಯಾಚರಣೆ (Mock Drill) ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು. ಹಲವು ದಿನಗಳಿಂದ ಯಾರ್ಡ್‌ನಲ್ಲಿ ನಿಲ್ಲಿಸಲಾಗಿದ್ದ ಬೋಗಿಗಳು ರೈಲ್ವೆ ಹಳಿಯ ಮೇಲೆ ಇರಲಿಲ್ಲ. ಘಟನೆಯ ಸಮಯದಲ್ಲಿ ಬೋಗಿಗಳ ಒಳಗೂ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ವೇಗವಾಗಿ ಹರಡಿದೆ ಎನ್ನಲಾಗಿದೆ. ಪರಿಣಾಮವಾಗಿ ಮೂರು ಬೋಗಿಗಳಿಗೆ ಬೆಂಕಿ ತಗುಲಿದ್ದು, ಅವುಗಳಲ್ಲಿ ಎರಡು ಬೋಗಿಗಳು ತೀವ್ರವಾಗಿ ಹಾನಿಗೊಳಗಾಗಿವೆ.

ಇದನ್ನೂ ಓದಿ: ಬೆಂಗಳೂರು: ಹೊಸಕೋಟೆ ಮೊಬೈಲ್ ಅಂಗಡಿ ಶಟರ್ ಕತ್ತರಿಸಿ ಕಳ್ಳತನ; ಲಕ್ಷಾಂತರ ಮೌಲ್ಯದ ಮೊಬೈಲ್ ಕಳವು

ಘಟನೆಯ ಕುರಿತು ಮಾಹಿತಿ ಸಂಗ್ರಹಿಸಲು ನೈರುತ್ಯ ರೈಲ್ವೆಯ (South Western Railway) ಬೆಂಗಳೂರು ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಯಲಹಂಕದ ಎಸ್‌ಎಂಆರ್ ಕೂಡ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಬೆಂಕಿ ಕಾಣಿಸಿಕೊಳ್ಳಲು ತಾಂತ್ರಿಕ ದೋಷ ಕಾರಣವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಅಧಿಕಾರಿಗಳು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories