ಬೆಂಗಳೂರು ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ, ಯುವತಿ ಸಜೀವ ದಹನ

Story Highlights

ಬೆಂಗಳೂರಿನ ರಾಜಾಜಿನಗರ (Rajajinagar) ರಾಜ್‌ಕುಮಾರ್ ರಸ್ತೆಯಲ್ಲಿ ಈ ದುರಂತ ನಡೆದಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡು ಸ್ಕೂಟರ್‌ಗಳಿಗೂ ಬೆಂಕಿ ಹೊತ್ತಿಕೊಂಡಿದೆ

ಬೆಂಗಳೂರು (Bengaluru): ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ (Electric Scooter Showroom) ಬೆಂಕಿ ಕಾಣಿಸಿಕೊಂಡು ಅಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಜೀವ ದಹನವಾದ ಘಟನೆ ನಡೆದಿದೆ.

ರಾಜಾಜಿನಗರ (Rajajinagar) ರಾಜ್‌ಕುಮಾರ್ ರಸ್ತೆಯಲ್ಲಿ ಈ ದುರಂತ ನಡೆದಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡು ಸ್ಕೂಟರ್‌ಗಳಿಗೂ ಬೆಂಕಿ ಹೊತ್ತಿಕೊಂಡಿದೆ. ಈ ಅವಘಡದಲ್ಲಿ ಪ್ರಿಯಾ ಎಂಬ ಸೇಲ್ಸ್ ಗರ್ಲ್ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ರಭಸಕ್ಕೆ ಇಡೀ ಶೋರೂಂ ಹೊತ್ತಿ ಉರಿದಿದೆ, ಅಪಾರ ಪ್ರಮಾಣದ ಬ್ಯಾಟರಿ ಸ್ಕೂಟರ್ ಹಾಗೂ ಇತರೆ ಉಪಕರಣಗಳು ಧ್ವಂಸಗೊಂಡಿದ್ದು ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತಂದರು. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

Fire breaks out at Bengaluru electric scooter showroom, Sales Girl burnt alive

Related Stories