ಮಹಿಳೆಯರೇ, ಬೆಂಗಳೂರು ಹೊಸಕೋಟೆಯಲ್ಲಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ, ಊಟ-ವಸತಿಯೂ ಫ್ರೀ!
Free Beauty Parlour Training: ಉಚಿತ ತರಬೇತಿ ಪಡೆಯಲು ಮಹಿಳೆಯರಿಗೆ ಅವಕಾಶ; 18ರಿಂದ 49 ವರ್ಷದೊಳಗಿನ ಆಸಕ್ತ ಮಹಿಳೆಯರು ಅಕ್ಟೋಬರ್ 22ರಂದು ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಬಹುದು.

- ಬ್ಯೂಟಿ ಪಾರ್ಲರ್ ತರಬೇತಿಗೆ 35 ದಿನಗಳ ಉಚಿತ ಶಿಬಿರ
- ಹೊಸಕೋಟೆಯಲ್ಲಿ ಕೇವಲ 35 ಅಭ್ಯರ್ಥಿಗಳಿಗೆ ಅವಕಾಶ
- ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ
ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ಹಸಿಗಾಳ ಅಂಚೆ ವ್ಯಾಪ್ತಿಯ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ (RSETI) ನಿರುದ್ಯೋಗಿ ಮಹಿಳೆಯರಿಗಾಗಿ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ (Free Beauty Parlour Training) ಶಿಬಿರವನ್ನು ಆಯೋಜಿಸಲಾಗಿದೆ.
ತರಬೇತಿ ಅವಧಿಯಲ್ಲಿ ಶಿಬಿರಾರ್ಥಿಗಳಿಗೆ ಉಚಿತ ತರಬೇತಿಯ ಜೊತೆಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ (Resource Persons) ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಸಂಸ್ಥೆಯ ವತಿಯಿಂದ ಪ್ರಮಾಣಪತ್ರ (Certificate) ನೀಡಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರು: ಹೊಸಕೋಟೆಯಲ್ಲಿ ಉಚಿತ ಕುರಿ ಸಾಕಾಣಿಕೆ ತರಬೇತಿ! ಊಟ ವಸತಿ ವ್ಯವಸ್ಥೆಯೂ ಇರಲಿದೆ
18 ವರ್ಷ ಮೇಲ್ಪಟ್ಟು 49 ವರ್ಷದೊಳಗಿನ ಆಸಕ್ತ ಮಹಿಳೆಯರು ಅಕ್ಟೋಬರ್ 22, 2026ರಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಪಡಿತರ ಚೀಟಿ (Ration Card), ಆಧಾರ್ ಕಾರ್ಡ್ (Aadhaar Card) ಹಾಗೂ ನಾಲ್ಕು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು.
ಗ್ರಾಮೀಣ ಪ್ರದೇಶದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ತರಬೇತಿಯಲ್ಲಿ ಆದ್ಯತೆ ನೀಡಲಾಗುತ್ತದೆ. ಒಟ್ಟು 35 ಮಂದಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 9886935603, 9591514154, 8970476050, 9686248369 ಅಥವಾ 6363139123 ಸಂಖ್ಯೆಗೆ ಸಂಪರ್ಕಿಸಬಹುದು.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



