ಮನಮೋಹನ್​ ಸಿಂಗ್ ನಿಧನ: ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಬೆಳಗಾವಿಯಲ್ಲಿ (Belagavi) ನಡೆಯುತ್ತಿದ್ದ ಕಾಂಗ್ರೆಸ್ ಶತಮಾನೋತ್ಸವ ಅಧಿವೇಶನದ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ.

  • ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ
  • ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
  • ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ರಾಜ್ಯದಲ್ಲಿ ವಾರವಿಡೀ ಶೋಕಾಚರಣೆ

ಬೆಂಗಳೂರು (Bengaluru): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (manmohan Singh)​ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ.  ಈ ಹಿನ್ನೆಲೆಯಲ್ಲಿ ಸರ್ಕಾರ ಶುಕ್ರವಾರ ಸರ್ಕಾರಿ ಕಚೇರಿಗಳು (Govt Holiday) ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ (School Holiday) ಘೋಷಿಸಿದೆ. ಈ ಕುರಿತು ಆದೇಶ ಹೊರಡಿಸಲಾಗಿದೆ. ವಾರವಿಡೀ ಅಂದರೆ 7 ದಿನ ಶೋಕಾಚರಣೆ ಆಚರಿಸಲಾಗುತ್ತದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಬೆಳಗಾವಿಯಲ್ಲಿ (Belagavi) ನಡೆಯುತ್ತಿದ್ದ ಕಾಂಗ್ರೆಸ್ ಶತಮಾನೋತ್ಸವ ಅಧಿವೇಶನದ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi), ಮಲ್ಲಿಕಾರ್ಜುನ ಖರ್ಗೆ, ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರರು ಕೂಡಲೇ ದೆಹಲಿಗೆ ತೆರಳಿದ್ದಾರೆ.

ಮನಮೋಹನ್ ಸಿಂಗ್ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಮನಮೋಹನ್ ಸಿಂಗ್ ಅವರ ಕೊಡುಗೆ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಾಳೆ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ, ಮತ್ತು ಮುಂದೆ ವರಿಷ್ಠರೊಂದಿಗೆ ಚರ್ಚೆ ಮಾಡಿ ಹೊಸ ದಿನಾಂಕದಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.

ಮನಮೋಹನ್​ ಸಿಂಗ್ ನಿಧನ: ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮನಮೋಹನ್ ಸಿಂಗ್ ಅವರ ಗೌರವಾರ್ಥ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಒಂದುವಾರ ಶೋಕಾಚರಣೆ ನಡೆಸಲಾಗುತ್ತದೆ. ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಮತ್ತು ಕೆಲವು ಸಚಿವರು ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದರು.

Govt holiday Today, 7 days of mourning in the state Due To Manmohan Singh Death

English Summary
Related Stories