ಗೃಹಲಕ್ಷ್ಮಿ ಯೋಜನೆ Vs ಸರ್ಕಾರ: ಹಣ ಬರುತ್ತೋ ಇಲ್ವೋ, ಇಲ್ಲಿದೆ ಬಿಗ್ ಅಪ್ಡೇಟ್

ಮೇ ತಿಂಗಳ ಗೃಹಲಕ್ಷ್ಮಿ ಹಣ ಸಚಿವರು ಒಂದು ವಾರದಲ್ಲಿ ಜಮೆಯಾಗುತ್ತದೆ ಎನ್ನುತ್ತಿದ್ದರೆ, ಮಹಿಳೆಯರು ಮೂರು ತಿಂಗಳು ಹಣ ಬಂದಿಲ್ಲ ಎನ್ನುತ್ತಿದ್ದಾರೆ.

  • ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣ ಇನ್ನೂ ಜಮೆಯಾಗಿಲ್ಲ
  • ಲಕ್ಷ್ಮೀ ಹೆಬ್ಟಾಳ್ಕರ್‌ ಪ್ರಕಾರ ಒಂದು ವಾರದಲ್ಲಿ ಹಣ ಲಭ್ಯ
  • ಮಹಿಳೆಯರು ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ದೂರು

ರಾಜ್ಯಾದ್ಯಂತ ಮಹಿಳೆಯರಲ್ಲಿ ನಿರೀಕ್ಷೆಯೇರುತ್ತಿರುವ ಗೃಹಲಕ್ಷ್ಮಿ (Gruha Lakshmi Scheme) ಯೋಜನೆಯ ಹಣವನ್ನು ಇನ್ನೂ ಪೂರ್ತಿಯಾಗಿ ಜಮೆ ಮಾಡಲಾಗದ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಆತಂಕವನ್ನು ಸಾಮಾಜಿಕ ಜಾಲತಾಣಗಳಲ್ಲಿ (social media) ಹಂಚಿಕೊಳ್ಳುತ್ತಿದ್ದಾರೆ.

ಕೆಲವರು ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ನಡುವೆಯೇ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ (Lakshmi Hebbalkar) ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ನೇಮಕಾತಿ! ಇಲ್ಲಿದೆ ಮಾಹಿತಿ

ಬೀದರ್ (Bidar) ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಹಣಕಾಸಿನ ತೊಂದರೆ ಇಲ್ಲವೆಯೆಂದು ಸ್ಪಷ್ಟಪಡಿಸಿದರು. “ಮೇ ತಿಂಗಳ ಹಣವನ್ನು ಒಂದು ವಾರದಲ್ಲಿ, ಜೂನ್‌ ತಿಂಗಳ ಹಣವನ್ನು ಜುಲೈ 15ರೊಳಗೆ ಖಾತೆಗೆ ಜಮೆ ಮಾಡಲಾಗುತ್ತದೆ” ಎಂದು ಅವರು ತಿಳಿಸಿದರು.

ಆದರೆ ಇನ್ನೊಂದು ಕಡೆ, ಮಹಿಳೆಯರು ತಮ್ಮ ಖಾತೆಗಳಿಗೆ ಹಣ ಮೂರು ತಿಂಗಳಿಂದ ಬಂದಿಲ್ಲ ಎನ್ನುತ್ತಿದ್ದಾರೆ. ಯೋಜನೆಯ ಬಗ್ಗೆ ಈ ಗೊಂದಲಗಳು ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆಯ ನಂಬಿಕೆಗೆ ಧಕ್ಕೆ ತರುತ್ತಿವೆ. ಪ್ರಾರಂಭದಲ್ಲಿ ಯೋಜನೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರೂ, ತಾಂತ್ರಿಕ ಸಮಸ್ಯೆಗಳು ಮತ್ತು ದಾಖಲೆಗಳ ಅಪೂರ್ಣತೆ ಮುಂತಾದ ಸಮಸ್ಯೆಗಳ ಕಾರಣ ಯೋಜನೆ ನಿರಂತರವಾಗಿ ವಿಳಂಬವಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ಸೇರಿ ಜುಲೈ 11ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಎಚ್ಚರಿಕೆ

Lakshmi Hebbalkar

ಈ ನಡುವೆ, ಬೀದರ್ ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷೆಗಾಗಿ ಪೊಲೀಸ್ ಇಲಾಖೆಯ ‘ಅಕ್ಕ ಪಡೆ’ (Akka Pade) ಮಾದರಿಯನ್ನು ರಾಜ್ಯಾದ್ಯಂತ ವಿಸ್ತರಿಸಲು ಸಚಿವರು ಚಿಂತನೆ ವ್ಯಕ್ತಪಡಿಸಿದ್ದಾರೆ. ಎಲ್ಲ ಪೊಲೀಸ್ ಆಯುಕ್ತರು ಮತ್ತು ಎಸ್‌ಪಿಗಳಿಗೆ ವೀಡಿಯೋ ಕಾನ್ಫರೆನ್ಸ್ (video conference) ಮೂಲಕ ಯೋಜನೆ ಬಗ್ಗೆ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರೈತರಿಗೆ ಸಿಹಿಸುದ್ದಿ! ಕುಸುಮ್-ಬಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ ವ್ಯವಸ್ಥೆ

ಕರ್ನಾಟಕ (Karnataka) ಸರ್ಕಾರದ ಐದು ಪ್ರಮುಖ ಗ್ಯಾರಂಟಿ (guarantee) ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದೆ. ಇದು ನೇರವಾಗಿ ಮನೆಯ ಗೃಹಿಣಿಗೆ ಆರ್ಥಿಕ ನೆರವಾಗುವ ಯೋಜನೆಯಾಗಿರುವುದರಿಂದ ಬಹಳಷ್ಟು ಫಲಾನುಭವಿಗಳು ಇದರ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Gruha Lakshmi Scheme Payment Delay, One Week Assured, But Concerns Rise

English Summary▼

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories