ಕರ್ನಾಟಕ ರಾಜ್ಯದಲ್ಲಿ ನಿಲ್ಲದ ಮಳೆ ಆರ್ಭಟ, ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ! - Karnataka Rains

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಯೆಲ್ಲೋ ಅಲರ್ಟ್ ಕೂಡ ಜಾರಿಯಲ್ಲಿದೆ.

  • ಕರ್ನಾಟಕದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
  • ದಕ್ಷಿಣ ಕನ್ನಡದಿಂದ ಬಳ್ಳಾರಿ ತನಕ ಮಳೆ ಎಚ್ಚರಿಕೆ
  • ಮಳೆಯಿಂದ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು (Bengaluru): ಕರ್ನಾಟಕದಾದ್ಯಂತ ಮಳೆಯ ತೀವ್ರತೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ (Karnataka Rains). ಹವಾಮಾನ ಇಲಾಖೆ ಆ. 9ರಿಂದ 13ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬೀಳುವ ನಿರೀಕ್ಷೆ ಇದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ: ನಾಳೆ ಪ್ರಧಾನಿ ಮೋದಿ ಬೆಂಗಳೂರು ಭೇಟಿ, ಹಲವೆಡೆ ಸಂಚಾರ ದಟ್ಟಣೆ ಸಾಧ್ಯತೆ

ಕೆಲವು ಪ್ರದೇಶಗಳಲ್ಲಿ ಮಳೆ ಅವಾಂತರವೂ (Heavy Rain) ಎದುರಾಗಿದೆ. ಹೆಚ್.ಡಿ.ಕೋಟೆ ತಾಲೂಕಿನಲ್ಲಿ ರಸ್ತೆಗಳು ಕೆಸರಿನಿಂದ ತುಂಬಿ, ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಸಂಚಾರದಲ್ಲಿ ಪರದಾಡುತ್ತಿದ್ದಾರೆ.

ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ಹನುಮಂತ ನಗರ ರಸ್ತೆಗಳಲ್ಲೂ ಮಳೆ ನೀರು ನಿಂತಿದ್ದು, ಸಮಸ್ಯೆ ಪರಿಹಾರಕ್ಕೆ ಸ್ಥಳೀಯರು ಹಲವು ಬಾರಿ ಮನವಿ ಮಾಡಿದರೂ ಆಡಳಿತ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕೂಡ ರಾತ್ರಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಂಗಮ್ಮನ ಪಾಳ್ಯದಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ: ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲು! ವಿಚಾರ ಏನು ಗೊತ್ತಾ?

ಅಂತರಗಂಗೆ ಬಳಿಯ ದರ್ಗಾ ಬಳಿ ಬೃಹತ್ ಮರ ನೆಲಕ್ಕರುಳಿದ ಘಟನೆ ಕೂಡ ನಡೆದಿದೆ. ಸ್ಥಳೀಯರು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಸಮಸ್ಯೆಗೆ ಕಾರಣ ಎಂದು ಆರೋಪಿಸುತ್ತಿದ್ದಾರೆ.

ರಾಜ್ಯದಾದ್ಯಂತ ಮಳೆಯ ಈ ಆರ್ಭಟದಿಂದ ಸಂಚಾರ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನತೆ ಹವಾಮಾನ ಇಲಾಖೆಯ ಎಚ್ಚರಿಕೆಗೆ (Weather Update) ಅನುಸಾರವಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Heavy rain alert in Karnataka for next 5 days

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories