ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು (Bengaluru): ಸಿಲಿಕಾನ್ ಸಿಟಿಯಲ್ಲಿ ಒಂದು ದಿನದ ಮಟ್ಟಿಗೆ ಬಿಡುವು ನೀಡಿದ್ದ ವರುಣ ಶನಿವಾರ ಮತ್ತೆ ಅಬ್ಬರಿಸಿದ್ದಾನೆ (Heavy Rains). ಮಧ್ಯಾಹ್ನದಿಂದ ನಗರದಾದ್ಯಂತ ಧಾರಾಕಾರ ಮಳೆಯಾಗಿದೆ.
ಮನೆಗೆ ತೆರಳುವ ವಿದ್ಯಾರ್ಥಿಗಳು ಮತ್ತು ನೌಕರರು ತೊಂದರೆ ಅನುಭವಿಸಿದರು. ದ್ವಿಚಕ್ರ ವಾಹನ ಸವಾರರು ಸೇತುವೆಗಳ ಕೆಳಗೆ ಆಶ್ರಯ ಪಡೆಯುವಂತಾಯಿತು.
ಕೆಲವರು ರೈನ್‌ಕೋಟ್‌ಗಳು ಮತ್ತು ಛತ್ರಿಗಳೊಂದಿಗೆ ಕಾಣಿಸಿಕೊಂಡರು. ಮೆಜೆಸ್ಟಿಕ್, ಯಶವಂತಪುರ, ಗುರುಗುಂಟೆಪಾಳ್ಯ, ಮೈಸೂರು ರಸ್ತೆ, ವಿಜಯನಗರ, ರೇಸ್ಕೋರ್ಸ್ ರಸ್ತೆ, ಜಯನಗರ, ಹೊರ ವರ್ತುಲ ರಸ್ತೆ, ಸಿಲ್ಕ್ ಬೋರ್ಡ್, ಮಲ್ಲೇಶ್ವರಂ, ಹೆಬ್ಬಾಳ, ಶಾಂತಿನಗರ ಮತ್ತಿತರ ಪ್ರದೇಶಗಳಲ್ಲಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹಗಲಿನಲ್ಲಿ ಮಳೆಯೊಂದಿಗೆ ಸಂಜೆಯಿಂದ ತಣ್ಣನೆಯ ಗಾಳಿ ಬೀಸುತ್ತಿತ್ತು. ಎಲ್ಲರೂ ಸ್ವೆಟರ್‌ಗಳನ್ನು ಹೊರತೆಗೆಯುವಂತಾಗಿದ್ದು, ನಗರವಾಸಿಗಳ ವಾರಾಂತ್ಯದ ಮೋಜಿಗೆ ಮಳೆ ಬ್ರೇಕ್ ಹಾಕಿದೆ.
ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (Weather in Bengaluru) ತಿಳಿಸಿದೆ. ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದರಿಂದ (Today Rain Update) ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ನಿವಾಸಿಗಳು ಎಚ್ಚರಿಕೆ ವಹಿಸಬೇಕು.
Heavy rain forecast for This districts Including Bengaluru