ಬೆಂಗಳೂರು ಸೇರಿದಂತೆ ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ ಮುನ್ಸೂಚನೆ

Story Highlights

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ (heavy rainfall till October 20th) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru : ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka rains) 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದೆ. ಈ ನಡುವೆ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ (heavy rainfall till October 20th) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು (Weather Update), ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಮಳೆಯಾಗಲಿದೆ (Bengaluru weather forecast). ಪಣಂಬೂರು, ಚಿಕ್ಕೋಡಿ, ಬೇಗೂರು, ರಾಯಲ್ಪಾಡು, ಗೌರಿಬಿದನೂರು, ತೊಂಡೇಭಾವಿ, ಸುಳ್ಯ, ಸೇಡಬಾಳ, ಚಿಕ್ಕಬಳ್ಳಾಪುರ, ಸಿರಾ, ನಾಪೋಕ್ಲು, ರಾಮನಗರ, ಶಿವಮೊಗ್ಗ, ಚಿಂತಾಮಣಿಯಲ್ಲಿ ಮಳೆಯಾಗಿದೆ.

Heavy rain in 12 districts of Karnataka including Bengaluru till August 20

Related Stories