Bangalore NewsKarnataka News
ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
- ಸಿಬಿಐ ತನಿಖೆಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ
- ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ಮುಂದುವರಿಯಲಿದೆ
- ತೀರ್ಪಿನಿಂದ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ತಾತ್ಕಾಲಿಕ ನಿರಾಳ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಡೆಸಿದ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ತನಿಖೆ ನಡೆಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆಯನ್ನು ಜನವರಿ 27, 2025 ರಂದು ಪೂರ್ಣಗೊಳಿಸಲಾಗಿತ್ತು.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಈ ತೀರ್ಪಿನಿಂದಾಗಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸಿಬಿಐ ತನಿಖೆಯಿಂದ ತಾತ್ಕಾಲಿಕವಾಗಿ ಮುಕ್ತರಾಗಿದ್ದಾರೆ. ಆದರೂ, ಮುಡಾ ನಿವೇಶನ ಹಂಚಿಕೆ ಸಂಬಂಧ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.
High Court Dismisses CBI Probe Request in MUDA Land Allocation Case
English Summary▼
Our Whatsapp Channel is Live Now 👇