Heavy Rain ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 2 ದಿನ ಶಾಲಾ-ಕಾಲೇಜುಗಳಿಗೆ ರಜೆ

ರಾಜ್ಯಾದ್ಯಂತ ಮಳೆಯ ಆರ್ಭಟ ನಿರಂತರವಾಗಿ ಮಳೆಯಿಂದ ತೀವ್ರವಾಗಿ ಹಾನಿಗೊಳಗಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

🌐 Kannada News :
  • ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ
  • ರಾಜ್ಯಾದ್ಯಂತ ಮಳೆಯ ಆರ್ಭಟ
  • ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ( Bangalore) : ರಾಜ್ಯಾದ್ಯಂತ ಮಳೆಯ ಆರ್ಭಟ (Heavy Rain) ನಿರಂತರವಾಗಿ ಮುಂದುವರೆದಿದ್ದು, ಮಳೆಯಿಂದ ತೀವ್ರವಾಗಿ ಹಾನಿಗೊಳಗಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ (Holidays for 2 day school-colleges). ಈ ಭಾಗದಲ್ಲಿ ಇಂದು ಸಹ ನಿರಂತರ ಮಳೆಯಾಗಿದೆ. ರಸ್ತೆ ಹಳ್ಳ ಕೊಳ್ಳಗಳು ತುಂಬಿವೆ.

ಕೋಲಾರ (Kolar) ಜಿಲ್ಲಾ ಟಿಡಿಪಿಐ ರೇವಣಸಿದ್ದಪ್ಪ ಮತ್ತು ಚಿಕ್ಕಪಳ್ಳಾಪುರ (Chikkaballapur) ಜಿಲ್ಲಾ ಟಿಡಿಪಿಐ ಜಯರಾಮ ರೆಡ್ಡಿ ಈ ವಿಷಯವನ್ನು ಎರಡು ಪ್ರತ್ಯೇಕ ಪತ್ರಿಕಾ ವರದಿಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಪಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ ಮಾಹಿತಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ 2 ದಿನ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ನವೆಂಬರ್ 23ರವರೆಗೆ ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ಸದ್ಯ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Holidays for 2 day school-colleges in Bangalore rural, Kolar and Chikkaballapur districts

 

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today