ಬೆಂಗಳೂರು: ವೇಲ್‌ನಿಂದ ಕುತ್ತಿಗೆ ಬಿಗಿದು ಪತ್ನಿಯ ಕೊಲೆ; ಪತಿ ಅರೆಸ್ಟ್

ಬೆಂಗಳೂರಿನ ಬಿಳ್ಳೇಕಹಳ್ಳಿಯಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (Bengaluru): ಬಿಳ್ಳೇಕಹಳ್ಳಿಯಲ್ಲಿ (Bilekahalli) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಮೈಕೋ ಲೇಔಟ್ ಠಾಣೆ ಪೊಲೀಸರು (Mico Layout Police) ಬಂಧಿಸಿದ್ದಾರೆ. ಮೃತರನ್ನು ಬಿಹಾರ ಮೂಲದ ಗುಂಜಮ್ಮದೇಸಿ (Gunjammadesi) ಎಂದು ಗುರುತಿಸಲಾಗಿದೆ.

ರಂಜಿತ್ ಕುಮಾರ್ ಗುಪ್ತಾ (Ranjit Kumar Gupta) ಬಂಧಿತ ಆರೋಪಿ. ಸೆಪ್ಟೆಂಬರ್ 16ರಂದು ಬಿಳ್ಳೇಕಹಳ್ಳಿಯ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಮನೆ ಮಾಲೀಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಸುಮಾರು ಒಂದು ವರ್ಷದಿಂದ ಬಿಳ್ಳೇಕಹಳ್ಳಿಯಲ್ಲಿ ವಾಸವಾಗಿದ್ದರು. ಕಳೆದ ಮೂರು ತಿಂಗಳಿಂದ ಕೌಟುಂಬಿಕ ವಿಚಾರಕ್ಕೆ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಸೆಪ್ಟೆಂಬರ್ 16ರಂದು ಬೆಳಗ್ಗೆ ಮಕ್ಕಳು ಶಾಲೆಗೆ ತೆರಳಿದ ಬಳಿಕ ರಂಜಿತ್ ಕುಮಾರ್ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬಂದಿದ್ದಾನೆ. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳ ಆರಂಭವಾಗಿದ್ದು, ಮಾತಿನ ಚಕಮಕಿ ತೀವ್ರಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿ ಪತ್ನಿಯ ಕುತ್ತಿಗೆಗೆ ವೇಲ್ (Scarf) ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ (Murder Case) ದಾಖಲಿಸಿಕೊಂಡ ಮೈಕೋ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದರು. ವಿಚಾರಣೆ ವೇಳೆ ರಂಜಿತ್ ಕುಮಾರ್ ಗುಪ್ತಾ ತನ್ನ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories