ಕುಡಿದ ನಶೆ, ಏಕ್‌ದಂ ಪೆಟ್ರೋಲ್ ಬಂಕ್‌ಗೆ ಕಾರು ಡಿಕ್ಕಿ! ಬೆಂಗಳೂರು ಹೊರವಲಯದಲ್ಲಿ ಘಟನೆ
ಅತ್ತಿಬೆಲೆ ಗಡಿಭಾಗದ ಪೆಟ್ರೋಲ್ ಬಂಕ್‌ಗೆ ವೇಗವಾಗಿ ಬಂದ ಜಾಗ್ವಾರ್ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ, ಸಿಬ್ಬಂದಿಗೆ ಗಂಭೀರ ಗಾಯವಾಗಿದ್ದು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ (Attibele Border) ಸಂಭವಿಸಿದ ಭೀಕರ ಅಪಘಾತವೊಂದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
ವೇಗವಾಗಿ ಬಂದ ಜಾಗ್ವಾರ್ ಕಾರು (Jaguar Car) ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಬಳಿಕ ಕಾರು ಮತ್ತು ಪಂಪ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಅಪಘಾತದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಕುಮಾರ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆ ಅತ್ತಿಬೆಲೆಯ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಸಂಜಯ್ ಎಂಬಾತ ಯುವತಿಯೊಬ್ಬಳೊಂದಿಗೆ ಕಾರಿನಲ್ಲಿ ಬಂದಿದ್ದ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿ (Drunk Driving) ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಮೊದಲು ಕಾರು ಬಂಕ್ ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ರಭಸವಾಗಿ ಪೆಟ್ರೋಲ್ ಪಂಪ್‌ಗೆ ಅಪ್ಪಳಿಸಿದೆ.
ಇದನ್ನೂ ಓದಿ: ಬೆಂಗಳೂರು to ಸಾಗರಕ್ಕೆ ಹೊರಟ ಸ್ಲೀಪರ್ ಬಸ್‌ಗೆ ಬೆಂಕಿ: ತಪ್ಪಿದ ಭಾರೀ ಅವಘಡ
ಡಿಕ್ಕಿಯ ರಭಸಕ್ಕೆ ಕಿಡಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರು ಹಾಗೂ ಪೆಟ್ರೋಲ್ ಪಂಪ್‌ಗೆ ವ್ಯಾಪಿಸಿದೆ. ಪರಿಸ್ಥಿತಿಯ ಅಪಾಯ ಅರಿತ ಚಾಲಕ ಮತ್ತು ಯುವತಿ ತಕ್ಷಣ ಕಾರಿನಿಂದ ಹೊರಬಂದಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಎಲೆಕ್ಟ್ರಾನಿಕ್ ಸಿಟಿ, ಆನೇಕಲ್ ಹಾಗೂ ತಮಿಳುನಾಡಿನ ಹೊಸೂರು (Hosur) ಭಾಗದಿಂದ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಅಗ್ನಿಶಾಮಕ ಸಿಬ್ಬಂದಿ (Fire and Rescue Team) ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವುದು ತಪ್ಪಿದೆ.
ಘಟನೆ ಸಂಬಂಧ ಅತ್ತಿಬೆಲೆ ಪೊಲೀಸರು (Attibele Police) ಕಾರು ಚಾಲನೆ ಮಾಡುತ್ತಿದ್ದ ಸಂಜಯ್‌ನನ್ನು ವಶಕ್ಕೆ ಪಡೆದಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಹಾಗೂ ಚಾಲಕನ ಸ್ಥಿತಿ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



