ಹಾಸನದಲ್ಲಿ ತಲೆಮರೆಸಿಕೊಂಡಿದ್ದ ನಟ ಮಡೆನೂರು ಮನು ಅರೆಸ್ಟ್
ಸಹ ಕಲಾವಿದೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ ಆರೋಪದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.
Publisher: Kannada News Today (Digital Media)
- ಶಾಂತಿಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಮಡೆನೂರು ಮನು ಅರೆಸ್ಟ್
- ಸಹ ಕಲಾವಿದೆಯ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು
- ಆರೋಪದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು
ಬೆಂಗಳೂರು (Bengaluru): ನಾಳೆ ಮಡೆನೂರು ಮನು ಅಭಿನಯದ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದ್ದು, ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಡೆನೂರು ಮನು (Madenur Manu) ಇದೀಗ ಅತ್ಯಾಚಾರ (Rape Case) ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಬಂಧನಕ್ಕೊಳಗಾಗಿದ್ದಾರೆ. ನಟನ ವಿರುದ್ಧ ಹಾಸನ ಮೂಲದ ಸಹ ಕಲಾವಿದೆಯೊಬ್ಬರು ಅತ್ಯಾಚಾರ ಆರೋಪ ಹೂರಿಸಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಮನು, ಹಾಸನದ ಶಾಂತಿಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು, ತಕ್ಷಣದಿಂದಲೇ ಪೊಲೀಸರು ತನಿಖೆ ಆರಂಭಿಸಿದ್ದರು. ಕೊನೆಗೂ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಕಾಮಿಡಿ ಕಿಲಾಡಿ ಖ್ಯಾತಿಯ ಈ ನಟ, ಹೊಸದಾಗಿ ಬಿಡುಗಡೆಯಾಗುತ್ತಿರುವ ಸಿನಿಮಾದೊಂದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಪ್ರಕರಣ ಬಯಲಿಗೆ ಬಂದಿರುವುದು ಚಿತ್ರತಂಡಕ್ಕೂ ಭಾರಿ ಶಾಕ್ ನೀಡಿದೆ. ಪ್ರ
ಕರಣದ ಬಗ್ಗೆ ಸಹ ಕಲಾವಿದೆ ನೀಡಿದ ದೂರಿನ ಪ್ರಕಾರ, “ಸಂಭಾವನೆ ನೀಡುವ ನೆಪದಲ್ಲಿ ನನ್ನನ್ನು ಮನೆಗೆ ಕರೆಯಿಸಿ, ಬಳಿಕ ನನ್ನ ಮೇಲೆ ಮನು ಅತ್ಯಾಚಾರ ಎಸಗಿದ” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಇದೀಗ ಈ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ (Police Investigation) ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರೆಸುತ್ತಿದೆ. ಈ ಪ್ರಕರಣ ಬಿಗಿಯಾಗಿ ಚರ್ಚೆಗೆ ಕಾರಣವಾಗಿದ್ದು, ಸಿನಿಮಾ ಬಿಡುಗಡೆಯ ನಡುವೆಯೇ ಈ ಆರೋಪ ಭಾರೀ ಚರ್ಚೆಗೆ ಗ್ರಾಸವಾಗಿದೆ.
Kannada Actor Madenur Manu Arrested in Rape Case