ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಮಸಿ ದಾಳಿ

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಮಸಿ ದಾಳಿ, ಪ್ರಕರಣ ದಾಖಲು, 8 ಮಂದಿ ಬಂಧನ

Online News Today Team

ಬೆಂಗಳೂರು (BENGALURU): ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ( farmers’ union leader Kodihalli Chandrasekhar) ಅವರ ಬಣದ ಮೇಲೆ ಜೆಡಿಎಸ್ ಕಾರ್ಯಕರ್ತರೊಬ್ಬರು (JDS activist) ಶನಿವಾರ ಮಸಿ ಎರಚಿರುವ ಘಟನೆ ನಡೆದಿದೆ.

ಪತ್ರಿಕಾಗೋಷ್ಠಿ (press conference) ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಇತರ ರೈತ ಮುಖಂಡರು ಶನಿವಾರ ಬೆಂಗಳೂರು ಪ್ರೆಸ್ ಕ್ಲಬ್‌ಗೆ (Bangalore Press Club) ಆಗಮಿಸಿದ್ದರು. ಆದರೆ, ಜೆಡಿಎಸ್ ಸದಸ್ಯರು ಕೋಡಿಹಳ್ಳಿ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡಲು ಆರಂಭಿಸಿದರು. ಈ ವೇಳೆ ರೈತ ಸಂಘ ಹಾಗೂ ಜೆಡಿಎಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು (clash between the Farmers’ Union and the JDS members). ಈ ವೇಳೆ ರೈತರಿಗೆ ಕಪ್ಪು ಮಸಿ ಬಳಿಯಲಾಯಿತು.

ಮಾತಿನ ಚಕಮತಿ ವೇಳೆ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrasekhar) ರೈತಸಂಘದ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು.

ಘಟನೆಯಲ್ಲಿ ಇಬ್ಬರು ರೈತ ಸಂಘದ ಕಾರ್ಯಕರ್ತರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಇದುವರೆಗೆ 8 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

JDS activists attack on farmer leader Kodihalli Chandrasekhar

Follow Us on : Google News | Facebook | Twitter | YouTube