ಕೋವಿಡ್ 4ನೇ ಅಲೆ ಭೀತಿ: ಶಾಲೆ ಬಂದ್ ಮಾಡಲ್ಲ: ಸಚಿವ ನಾಗೇಶ್
ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ `ಯಾವುದೇ ಕಾರಣಕ್ಕೂ ಶಾಲೆಗಳನ್ನು ಬಂದ್ ಮಾಡುವುದಿಲ್ಲ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ `ಯಾವುದೇ ಕಾರಣಕ್ಕೂ ಶಾಲೆಗಳನ್ನು ಬಂದ್ ಮಾಡುವುದಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಈಗಾಗಲೇ ಸಿಎಂ ಬೊಮ್ಮಾಯಿ ಕೂಡಾ ಈ ಸಂಬಂಧ ಸಭೆ ನಡೆಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳೇನಿದೆ ಅದನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಶಿಕ್ಷಣ ಇಲಾಖೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ತಿಳಿಸಿದರು.
`ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಬಂದ್ ಮಾಡುವುದಿಲ್ಲ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಆದರೆ, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ’ ಎಂದು ಸಚಿವರು ತಿಳಿಸಿದರು.
Covid 4th wave panic School cannot be closed
Follow Us on : Google News | Facebook | Twitter | YouTube