ಸಿಎಂ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ಆಸ್ಪತ್ರೆಗೆ! ಇಂದಿನ ಪ್ರವಾಸ ರದ್ದು
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ ಎಂದು ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು
Bengaluru : ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramaiah) ಅವರ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸವನ್ನು ಇಂದು ದಿಢೀರ್ ರದ್ದುಗೊಳಿಸಲಾಗಿದೆ. ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ (Hospital) ತೆರಳಿದ್ದಾರೆ.
ಇದರಿಂದಾಗಿ, ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಆಗಮಿಸುವ ಅವರ ಯೋಜನೆ ಅನುಷ್ಠಾನಗೊಳ್ಳಲಿಲ್ಲ. ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಭಾರಿ ಭದ್ರತೆ ಒದಗಿಸಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ ಎಂದು ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಈ ಭಾಗದಲ್ಲಿ 500ಕ್ಕೂ ಹೆಚ್ಚು ಪೊಲೀಸರು ಹಾಗೂ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಅವರ ನೇತೃತ್ವದಲ್ಲಿ 1 ಎಸ್ಪಿ, 1 ಎಎಸ್ಪಿ, 4 ಡಿ.ವೈ.ಎಸ್ಪಿ, 20 ಸಿ.ಪಿ.ಐ, 2 ಕೆ.ಎಸ್.ಆರ್.ಪಿ ಸೇರಿ ಭದ್ರತೆ ಒದಗಿಸಲಾಗಿತ್ತು.
ಆದಾಗ್ಯೂ, ಸಿದ್ದರಾಮಯ್ಯ ಅನಾರೋಗ್ಯದ ಕಾರಣದಿಂದಾಗಿ, ಈ ಸಭೆ ಮತ್ತು ಪ್ರವಾಸವನ್ನು ತಕ್ಷಣವೇ ರದ್ದುಗೊಳಿಸಲಾಗಿದೆ. ಸಿಎಂ ಭೇಟಿ ಮುಂದೂಡಲ್ಪಟ್ಟಿರುವುದರಿಂದ, ಈಗ ಭದ್ರತಾ ವ್ಯವಸ್ಥೆಯನ್ನು ಹಿಂತೆಗೆದುಕೊಳ್ಳಲಾಗಿದೆ.
Karnataka CM Siddaramaiah Cancels Visit Due to Health Issues