ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಗೆ ಕೊರೊನಾ ಪಾಸಿಟಿವ್

ಕರ್ನಾಟಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೋಮವಾರ ಟ್ವೀಟ್ ಮಾಡಿದ್ದು. “ಕೋವಿಡ್ -19 ಗೆ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ನಾನು ಕೆಲವು ದಿನಗಳವರೆಗೆ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.. ಯಾವುದೇ ಲಕ್ಷಣಗಳು ಇಲ್ಲದಿರುವುದರಿಂದ ಯಾವುದೇ ಭೀತಿ ಇಲ್ಲ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

( Kannada News ) ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿಯ ಆತಂಕವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಗೆ ಕೊರೊನಾ ಪಾಸಿಟಿವ್
ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಗೆ ಕೊರೊನಾ ಪಾಸಿಟಿವ್

ಯಾವುದೇ ಲಕ್ಷಣಗಳಿಲ್ಲದ ಕಾರಣ ಯಾವುದೇ ಭೀತಿ ಇಲ್ಲ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದ್ದ ಸಚಿವರಲ್ಲಿ ಅವರು ಕೂಡ ಇದ್ದರು. 

ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ (ಬೆಳಗಾವಿ ಸಂಸದ), ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಮತ್ತು ಬಸವಕಲ್ಯಾಣ್ ಕಾಂಗ್ರೆಸ್ ಶಾಸಕ ಬಿ ನಾರಾಯಣ್ ರಾವ್ ಅವರು ಇತ್ತೀಚೆಗೆ ಕರೋನವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

Web Title : Karnataka education minister Suresh Kumar tests positive for coronavirus

Scroll Down To More News Today