ಬೆಂಗಳೂರು: ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 28 ಕ್ಕೆ ಮುಂದೂಡಿತ್ತು
ಬೆಂಗಳೂರು (Bengaluru): ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ಕನ್ನಡ ನಟ ದರ್ಶನ್ (Kannada Actor Darshan Thoogudeepa) ಜಾಮೀನು ಕುರಿತು ಸೋಮವಾರ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಸೋಮವಾರ ಹೈಕೋರ್ಟ್‌ನಲ್ಲಿ (Karnataka High Court) ವಿಚಾರಣೆ ನಡೆಯಲಿದೆ. ದರ್ಶನ್ ಅವರ ವೈದ್ಯಕೀಯ ವರದಿಯನ್ನು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವು ಇದೆ ಎನ್ನಲಾಗಿದೆ. ಇತ್ತೀಚೆಗಷ್ಟೇ ವೈದ್ಯರು ಎಂಆರ್ ಐ ಸ್ಕ್ಯಾನ್ ಮಾಡಿದ್ದರು.
ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 28 ಕ್ಕೆ ಮುಂದೂಡಿತ್ತು. ಜಾಮೀನು ವಿಚಾರಣೆಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಇದೆ ಮಂಗಳವಾರ ನಡೆಸಿತು.
ದರ್ಶನ್ ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ ಎಂದು ನಟನ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ದರ್ಶನ್ ಪರ ವಾದ ಮಂಡಿಸಿದ ವಕೀಲ ಬಿ.ವಿ.ನಾಗೇಶ್ ಅವರು ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ನಟನಿಗೆ ವೈದ್ಯಕೀಯ ಕಾರಣ ನೀಡಿ ಜಾಮೀನು ನೀಡಬೇಕು ಎಂದು ಹೈಕೋರ್ಟ್‌ನಲ್ಲಿ ಮನವಿ ಮಾಡಿದರು. ನಟ ದರ್ಶನ್ ಅವರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಆದಷ್ಟು ಬೇಗ ಜಾಮೀನು ನೀಡಬೇಕು ಎಂದು ನಾಗೇಶ್ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆದರೆ ವೈದ್ಯಕೀಯ ವರದಿಗಳನ್ನು ಸಲ್ಲಿಸುವಂತೆ ವಕೀಲರಿಗೆ ಸೂಚಿಸಿದ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದ್ದರು.
ನ್ಯಾಯಾಧೀಶರು ಈ ವೈದ್ಯಕೀಯ ವರದಿಯನ್ನು ಪರಿಗಣಿಸುತ್ತಾರೆಯೇ ಇಲ್ಲವೇ ಕಾದುನೋಡಬೇಕಿದೆ.
Karnataka High Court Bail hearing of actor Darshan Today