ಕರ್ನಾಟಕ ಮಳೆ: ಬೆಂಗಳೂರಿಗೆ ಹೆಚ್ಚು ಹಾನಿ; ತೀವ್ರ ಜಲಾವೃತ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಕರ್ನಾಟಕದಲ್ಲಿ ಭಾರೀ (Karnataka Rain) ಮಳೆಯಾಗುತ್ತಿದ್ದು, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಭಾರೀ ಅವಾಂತರಕ್ಕೆ ಕಾರಣವಾಗಿದೆ.
ಬೆಂಗಳೂರು (Bengaluru): ಕರ್ನಾಟಕದಲ್ಲಿ ಭಾರೀ (Karnataka Rain) ಮಳೆಯಾಗುತ್ತಿದ್ದು, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಭಾರೀ ಅವಾಂತರಕ್ಕೆ ಕಾರಣವಾಗಿದೆ. ಅನೇಕ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದ್ದು, ಕೊಯ್ಲಿಗೆ ಸಿದ್ಧವಾಗಿರುವ ಬೆಳೆಗಳನ್ನು ಕಳೆದುಕೊಳ್ಳುವ ಭಯದಲ್ಲಿರುವ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ.
ಈ ಕುರಿತು ಮಂಗಳವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಪರಿಹಾರ ನೀಡಲು ಕ್ರಮ ಕೈಗೊಂಡಿದ್ದು, ಪರಿಹಾರ ನೀಡಲು ಸಿದ್ಧತೆ ನಡೆಸಿದ್ದೇವೆ ಎಂದಿದ್ದಾರೆ.
ಬೆಂಗಳೂರು ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, ಹಲವರು ಸಿಲುಕಿರುವ ಶಂಕೆ
ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದಾಗುವ ಅನಾಹುತಗಳ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸ್ಥಳ ಸಮೀಕ್ಷೆ ನಡೆಸಲಾಗುತ್ತಿದೆ, ಅಗತ್ಯ ಪರಿಹಾರ ನೀಡುತ್ತೇವೆ ಎಂದರು.
ಬೆಂಗಳೂರಿನ ತಗ್ಗು ಪ್ರದೇಶಗಳು ವಿಶೇಷವಾಗಿ ತೀವ್ರವಾಗಿ ಹಾನಿಗೊಳಗಾಗಿವೆ, ರಸ್ತೆಗಳಲ್ಲಿ ನೀರು ಆವರಿಸಿದೆ ಮತ್ತು ದೈನಂದಿನ ಜೀವನವನ್ನು ಕಷ್ಟಕರವಾಗಿದೆ. ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಮತ್ತೆ ಗುಂಡಿಗಳು ಕಾಣಿಸಿಕೊಂಡು ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು ಕೆಂಗೇರಿಯಲ್ಲಿ ದುರ್ಘಟನೆ, ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಅಣ್ಣ ತಂಗಿ
ಯಲಹಂಕದಲ್ಲಿ (Yelahanka) ತಗ್ಗು ಪ್ರದೇಶದ ಹಲವು ಮನೆಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ. ಯಲಹಂಕ ಓಲ್ಡ್ ಟೌನ್ ರಸ್ತೆ ಮುಳುಗಡೆಯಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಮತ್ತು ಇತರ ಹಲವಾರು ವಾಹನಗಳ ಇಂಜಿನ್‌ಗೆ ನೀರು ನುಗ್ಗಿದ್ದರಿಂದ ಸ್ಥಗಿತಗೊಂಡಿದೆ.
ಟ್ರಾಫಿಕ್ ಸಮಸ್ಯೆಗಳನ್ನು ನಿವಾರಿಸಲು ರಸ್ತೆಗಳಲ್ಲಿ ಸಿಲುಕಿರುವ ವಾಹನಗಳನ್ನು ಮೇಲೆತ್ತಲು ಅಧಿಕಾರಿಗಳು ಕ್ರೇನ್‌ಗಳನ್ನು ಬಳಸುತ್ತಿದ್ದಾರೆ. ಚಿಕ್ಕಬೊಮ್ಮಸಂದ್ರದಲ್ಲಿ 60 ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, ಅಂಬೇಡ್ಕರ್ ನಗರದ ನಿವಾಸಿಗಳು, ಮಕ್ಕಳು ಸೇರಿದಂತೆ, ಹೆಚ್ಚಿನ ನೀರಿನ ಮಟ್ಟದಿಂದ ಸ್ಥಳಾಂತರಗೊಂಡಿದ್ದಾರೆ, ಇನ್ನುಳಿದಂತೆ ಅಮೃತಹಳ್ಳಿ, ಕೋಗಿಲು, ಮಾರುತಿನಗರ ಪ್ರದೇಶಗಳೂ ಇದೇ ಸಮಸ್ಯೆ ಎದುರಿಸುತ್ತಿವೆ.
#WATCH | Karnataka: Severe waterlogging witnessed at Kendriya Vihar apartment in Yelahanka area of Bengaluru pic.twitter.com/CGeOf2HUFC
— ANI (@ANI) October 22, 2024
Karnataka is experiencing heavy rains, especially in the capital city of Bengaluru