ಮುಡಾ ಹಗರಣ: ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯಗೆ ಲೋಕಾಯುಕ್ತ ಸಮನ್ಸ್
ಕರ್ನಾಟಕ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ
ಬೆಂಗಳೂರು (Bengaluru) : ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸರು ಸಿಎಂ ಸಿದ್ದರಾಮಯ್ಯ (Cm Siddaramaiah) ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಹೌದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು ಸಮನ್ಸ್ ಜಾರಿ ಮಾಡಿರುವುದನ್ನು ಸಿಎಂ ಕೂಡ ಖಚಿತಪಡಿಸಿದ್ದಾರೆ. ಅಲ್ಲದೆ, ಈ ತಿಂಗಳ 6ರಂದು ವಿಚಾರಣೆಗೆ ಹಾಜರಾಗುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.
”ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರಿಂದ ನನಗೆ ಸಮನ್ಸ್ ಬಂದಿದೆ. ಇದೇ ತಿಂಗಳ 6ರಂದು ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೇ ಪ್ರಕರಣದಲ್ಲಿ ಅವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತರು ಕಳೆದ ತಿಂಗಳು 25ರಂದು ವಿಚಾರಣೆ ನಡೆಸಿದ್ದರು. ಈ ಹಿಂದೆ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ರಾಜಕೀಯ ದ್ವೇಷ, ಷಡ್ಯಂತ್ರಗಳಿಗೆ ಇದೆಲ್ಲ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.
Karnataka Lokayukta Police Issued Summons To Karnataka Cm Siddaramaiah