ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಗ್ರೀನ್ ಸಿಗ್ನಲ್!
ಮೂರು ವರ್ಷಗಳಿಂದ ವಿಳಂಬಗೊಂಡಿದ್ದ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ. ಮೇ ತಿಂಗಳೊಳಗೆ ಮೀಸಲಾತಿ ಪಟ್ಟಿ ಅಂತಿಮಗೊಳ್ಳಲಿದ್ದು, ಜೂನ್ ಅಥವಾ ಜುಲೈನಲ್ಲಿ ಚುನಾವಣೆ ಸಾಧ್ಯ.
- ಹೈಕೋರ್ಟ್ ಆದೇಶದಂತೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮುಹೂರ್ತ
- ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿ, ಜೂನ್-ಜುಲೈನಲ್ಲಿ ಚುನಾವಣೆ ಸಾಧ್ಯ
- ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಚುನಾವಣೆಗೆ ಸಿದ್ಧರಾಗುವ ಸೂಚನೆ
ಚುನಾವಣೆ ಯಾವಾಗ? ಹೈಕೋರ್ಟ್ ಆದೇಶ ಏನು?
ಬೆಂಗಳೂರು (Bengaluru): ಕರ್ನಾಟಕದಲ್ಲಿ ಮೂರುವರೆ ವರ್ಷಗಳಿನಿಂದ ವಿಳಂಬವಾಗಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ (Panchayat Elections) ಇದೀಗ ಹೈಕೋರ್ಟ್ ಕಾನೂನುಬದ್ಧತೆ ನೀಡಿದೆ.
ರಾಜ್ಯ ಚುನಾವಣಾ ಆಯೋಗದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮೇ ತಿಂಗಳೊಳಗೆ ಮೀಸಲಾತಿ ಪಟ್ಟಿ ನೀಡಿದರೆ, ಮುಂಬರುವ ಜೂನ್ ಅಥವಾ ಜುಲೈನಲ್ಲಿ ಚುನಾವಣೆ ಆಯೋಜಿಸಲು ಸಾಧ್ಯವಿರುವುದಾಗಿ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಬಗ್ಗೆ ಡಿಕೆ ಶಿವಕುಮಾರ್ ಕೊಟ್ರು ಸಿಹಿ ಸುದ್ದಿ
ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಇಂದು (ಫೆಬ್ರವರಿ 17) ಹೈಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರ ಮೇ ತಿಂಗಳೊಳಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸುವುದಾಗಿ ಹೇಳಿದರು. ಈ ಹೇಳಿಕೆಯನ್ನು ದಾಖಲಿಸಿಕೊಂಡು, ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗದ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ನಿನ್ನೆ ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ಈ ಬೆಳವಣಿಗೆಯ ಮೊದಲು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೆಬ್ರವರಿ 16ರಂದು ಪ್ರತಿಕ್ರಿಯಿಸಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧವಾಗುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು.
ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಹಣ ಇನ್ಮೇಲೆ ತಪ್ಪದೆ ಖಾತೆಗೆ ಜಮಾ ಆಗುತ್ತೆ: ಕೆ.ಹೆಚ್.ಮುನಿಯಪ್ಪ
ಈ ಹಿನ್ನೆಲೆಯಲ್ಲಿ, ಸರ್ಕಾರದ ಪರ ವಕೀಲರು ಮೇ ನಂತರ ಚುನಾವಣೆ ಸಾಧ್ಯವೆಂದು ತಿಳಿಸಿದ್ದರಿಂದ, ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಈ ಚುನಾವಣೆ ನಡೆಯದ ಕಾರಣ, ಚುನಾವಣಾ ಆಯೋಗ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿತ್ತು. ಈಗ, ಹೈಕೋರ್ಟ್ ತೀರ್ಪಿನಿಂದ, ತಾತ್ಕಾಲಿಕ ಅಡಚಣೆಗೆ ತೆರೆಬಿದ್ದಂತಾಗಿದೆ.
Karnataka Panchayat Elections Likely in June-July