ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆ ಸಾಧ್ಯತೆ
Bengaluru, Karnataka Rains : ಬೆಂಗಳೂರು ನಗರ (Bengaluru City), ಬೆಂಗಳೂರು ಗ್ರಾಮಾಂತರ (Bengaluru Rural) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 23ರವರಗೆ ಮಳೆ (Heavy Rains) ಮುಂದುವರೆಯಲಿದೆ
ಬೆಂಗಳೂರು (Bengaluru) Karnataka Rains : ಇತ್ತೀಚಿಗೆ ಸುರಿದ ಮಳೆಯಿಂದ ತೀವ್ರ ಜಲಾವೃತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಗರದಾದ್ಯಂತ ಹಲವಾರು ತಗ್ಗು ಪ್ರದೇಶಗಳಿಗೆ ತೊಂದರೆಯಾಗಿದೆ. ಭಾರೀ ಮಳೆಯಿಂದಾಗಿ ನಗರದ ಮಾನ್ಯತಾ ಟೆಕ್ ಪಾರ್ಕ್ ಮುಳುಗಡೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ತೀವ್ರ ಜಲಾವೃತಗೊಂಡ ನಂತರ ಸಂಚಾರ ಸ್ಥಗಿತಗೊಂಡಿತು.
ಅಕ್ಟೋಬರ್ 17 ರಿಂದ ಅಕ್ಟೋಬರ್ 22 ರವರೆಗೆ, ಬೆಂಗಳೂರು ಹೆಚ್ಚಾಗಿ ಮೋಡ ಕವಿದ ವಾತಾವರಣ ಅನುಭವಿಸುವ ನಿರೀಕ್ಷೆಯಿದೆ ಮತ್ತು ವಿವಿಧ ಹಂತದ ಮಳೆಯಾಗುತ್ತದೆ.
ಬೆಂಗಳೂರು ಹೆಬ್ಬಾಳದಲ್ಲಿ ಘಟನೆ, ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸಾವು
ಕಳೆದ 5 ದಿನಗಳಿಂದ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ರಾಜ್ಯದಲ್ಲಿ (Karnataka State)ಮಳೆ ಸುರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಕೂಡ ಸೃಷ್ಟಿಸಿದೆ.
ಇನ್ನು ಅಕ್ಟೋಬರ್ 22ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain Update) ನಿರೀಕ್ಷೆಯಿದ್ದು, ನಂತರ ಮಳೆಯ ತೀವ್ರತೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮಳೆ – ಬೆಂಗಳೂರು ಹವಾಮಾನ
ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಗುರುವಾರದಂದು ಮಳೆ ತಗ್ಗಿದಂತೆ ಕಂಡುಬಂದಿದ್ದರೂ, ಹಲವು ಕಡೆ ಹಗುರ ಮಳೆಯಾಗಿದೆ. ಇನ್ನು ಇಂದು ಸಹ (ಶುಕ್ರವಾರ, ಅ. 18) ಮಳೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ಇದೆ.
ಅಕ್ಟೋಬರ್ 22ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಂತರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ಬನಶಂಕರಿಯಲ್ಲಿ ದಾರಿ ತಪ್ಪಿದ ಪತ್ನಿ ಹಾಗೂ ಪ್ರಿಯಕರನ ಕಥೆ ದುರಂತದಲ್ಲಿ ಅಂತ್ಯ
ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ (Karnataka Districts) ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ (Bengaluru City), ಬೆಂಗಳೂರು ಗ್ರಾಮಾಂತರ (Bengaluru Rural), ತುಮಕೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 23ರವರಗೆ ಮಳೆ (Heavy Rains) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Rains Update including Bengaluru Rain