ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಪತ್ನಿಯ ತನಿಖೆ ನಡೆಸಿದ ಲೋಕಾಯುಕ್ತ

Story Highlights

ಶುಕ್ರವಾರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ (Siddaramaiah's wife Parvathi ) ಅವರನ್ನು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದರು.

ಬೆಂಗಳೂರು (Bengaluru / Mysore): ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramaiah) ಅವರ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಿ ವಿವರ ಸಂಗ್ರಹಿಸಿದ್ದಾರೆ. ಮುಡಾ ಅಧಿಕಾರಿಗಳು ನಿಯಮ ಉಲ್ಲಂಘಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿಗೆ ಮನೆ ನಿವೇಶನ ನೀಡಿರುವ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿಯನ್ನು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿ ಹಲವು ವಿವರ ಕಲೆಹಾಕಿದ್ದಾರೆ.

ಬೆಂಗಳೂರು ಓಲಾ ಶೋರೂಂ ಮುಂದೆ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡ ವಿಡಿಯೋ ವೈರಲ್

ಶುಕ್ರವಾರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ (Siddaramaiah’s wife Parvathi ) ಅವರನ್ನು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದರು. ನಾಲ್ಕು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಉತ್ತರಿಸಿದರು ಎಂದು ತಿಳಿದು ಬಂದಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಪತ್ನಿ ಲೋಕಾಯುಕ್ತ ಅಧಿಕಾರಿಗಳಿಗೆ ಕೆಲ ದಾಖಲೆಗಳನ್ನು ನೀಡಿದ್ದಾರೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಕೆಲವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Lokayukta officials interrogated Karnataka CM Siddaramaiah’s wife Parvathi

Related Stories