Bengaluru Fire: ಬೆಂಗಳೂರು ಬೇಗೂರು ವ್ಯಾಪ್ತಿಯಲ್ಲಿ ಸ್ಕ್ರಾಪ್ ಗೋಡೌನ್‌ಗೆ ಬೆಂಕಿ! ಭಾರೀ ಅಗ್ನಿ ಅವಘಡ

ಬೇಗೂರು ವ್ಯಾಪ್ತಿಯ ಅಕ್ಷಯನಗರ ಸ್ಕ್ರಾಪ್ ಗೋದಾಮಿನಲ್ಲಿ ಪ್ಲಾಸ್ಟಿಕ್ ವಸ್ತುಗಳು ಹೊತ್ತಿ ಉರಿದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ

  • ಸ್ಕ್ರಾಪ್ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ
  • ಪ್ಲಾಸ್ಟಿಕ್ ವಸ್ತುಗಳು ಹೊತ್ತಿ ಉರಿದು ಆತಂಕ
  • ಅಗ್ನಿಶಾಮಕ ದಳದಿಂದ ಬೆಂಕಿ ನಿಯಂತ್ರಣ

ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬೇಗೂರು ವ್ಯಾಪ್ತಿಯ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋಡೌನ್‌ನಲ್ಲಿ ಭಾರಿ ಬೆಂಕಿ (Fire Breaks Out at Scrap Godown) ಕಾಣಿಸಿಕೊಂಡಿದೆ.

ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಏಕಾಏಕಿ ಹೊತ್ತಿ ಉರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಬೆಂಕಿಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು.

ಬೆಂಕಿಯ ತೀವ್ರತೆ (Fire Accident) ಹೆಚ್ಚಾಗಿದ್ದರೂ, ನಿರಂತರ ಪ್ರಯತ್ನದಿಂದ ಅಗ್ನಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಡ್ರಗ್ಸ್ ದಂಧೆ; ಇಬ್ಬರು ವಿದೇಶಿಗರ ಬಂಧನ, 1 ಕೋಟಿ ಮೌಲ್ಯದ ಮಾದಕ ವಸ್ತು ವಶ

ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಿಲ್ಲ

ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ ಸ್ಕ್ರಾಪ್ ಗೋಡೌನ್‌ನಲ್ಲಿ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ವಸ್ತುಗಳಿದ್ದುದರಿಂದ ಬೆಂಕಿ ವೇಗವಾಗಿ ಹರಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಕುರಿತು ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಸುತ್ತಮುತ್ತಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದು, ಭವಿಷ್ಯದಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories