ಬೆಂಗಳೂರು: ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ ಮಗುವಿಗೆ ಒದ್ದ ವ್ಯಕ್ತಿ! ವಿಡಿಯೋ ನೋಡಿ ರಕ್ತ ಕುದಿಯುತ್ತೆ

ಬೆಂಗಳೂರು ದಕ್ಷಿಣ ಭಾಗದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಹಿಂಬದಿಯಿಂದ ಬಂದು ಒದ್ದ ವ್ಯಕ್ತಿಯ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

  • ಆಟವಾಡುತ್ತಿದ್ದ ಮಗುವಿಗೆ ಒದ್ದ ವ್ಯಕ್ತಿ ಕೃತ್ಯ ಸಿಸಿಟಿವಿಯಲ್ಲಿ ಸೆರೆ
  • ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ, ವಿಡಿಯೋ ವೈರಲ್
  • ಬೆಂಗಳೂರು ಬನಶಂಕರಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು (Bengaluru):ಬೆಂಗಳೂರು ದಕ್ಷಿಣ ಭಾಗದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ತನ್ನ ಮನೆಯ ಹೊರಭಾಗದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬನು ಏಕಾಏಕಿ ಒದ್ದು ಕೆಳಗೆ ಬೀಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಬನಶಂಕರಿ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಯಾರು?

ಬಂಧಿತನನ್ನು ರಂಜನ್ (35 ವರ್ಷ) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯು ಮಾನಸಿಕವಾಗಿ ಸ್ಥಿರವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ಕಂಡ ದೃಶ್ಯ

ಸಿಸಿಟಿವಿ ದೃಶ್ಯಗಳಲ್ಲಿ ರಂಜನ್ ತನ್ನ ಮನೆಯ ಗೇಟ್‌ನಿಂದ ಹೊರಬಂದು, ಆಟವಾಡುತ್ತಿದ್ದ ಬಾಲಕನನ್ನು ಹಿಂಬದಿಯಿಂದ ಬಲವಾಗಿ ಒದ್ದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಪರಿಣಾಮವಾಗಿ ಮಗು ರಸ್ತೆಯ ಮೇಲೆ ಬಿದ್ದು ಮುಖಕ್ಕೆ ಗಾಯವಾಗಿದೆ.

ಬಿದ್ದ ರಭಸಕ್ಕೆ ಬಾಲಕನ ಮುಖ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಮಗನೊಂದಿಗೆ ಸಂಬಂಧಿಕರ ಮನೆಗೆ ಬಂದಿದ್ದ ತಾಯಿ ದೀಪಿಕಾ ಜೈನ್ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

TRENDING ARTICLES1 / 7
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories