ಬೆಂಗಳೂರು ಅನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳು ಜಖಂ, ಇಬ್ಬರ ದುರ್ಮರಣ
ಬೆಂಗಳೂರು ಆನೇಕಲ್ ಹೊರವಲಯದಲ್ಲಿ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ 14 ಕಿಲೋಮೀಟರ್‌ಗಳವರೆಗೆ ದೌಡಾಯಿಸಿ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರ ಜೀವ ಕಸಿದುಕೊಂಡಿದೆ.
- ಅನೇಕಲ್ ಅಪಘಾತ: ಕಂಟೈನರ್ ಲಾರಿ ಅಟ್ಟಹಾಸ
- 20ಕ್ಕೂ ಹೆಚ್ಚು ವಾಹನಗಳು ಜಖಂಗೊಂಡು ಭಾರೀ ನಷ್ಟ
- 14 ಕಿಲೋಮೀಟರ್‌ಗಳು ಪೊಲೀಸರ ಚೇಸ್
ಬೆಂಗಳೂರು ಹೊರವಲಯದ ಅನೇಕಲ್ (Bengaluru Anekal) ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು (Container Lorry Crash) ರಸ್ತೆಯಲ್ಲಿ ಸಾಗುತ್ತಿದ್ದ ಹಾಗೂ ರಸ್ತೆಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲೆಲ್ಲಿ ಅಪಘಾತ ನಡೆದಿದೆ?
ಪೊಲೀಸರ ಮಾಹಿತಿ ಪ್ರಕಾರ, ಅಪಘಾತ ಅನೇಕಲ್ (Anekal Accident) ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಸುಮಾರು 14 ಕಿಲೋಮೀಟರ್‌ಗಳ ವ್ಯಾಪ್ತಿಯಲ್ಲಿ ನಡೆದಿದೆ. ಈ ಅವಧಿಯಲ್ಲಿ ಕಂಟೈನರ್ ಚಾಲಕ ಬೇಜವಾಬ್ದಾರಿಯಾಗಿ ಚಾಲನೆ ಮಾಡಿ ಕನಿಷ್ಠ 20ಕ್ಕೂ ಹೆಚ್ಚು ಕಾರು, ಬೈಕ್ ಮತ್ತು ಇತರೆ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್, ಡಿಕ್ಕಿ ಹೊಡೆದ ಹಲವು ವಾಹನಗಳು ರಸ್ತೆ ಬದಿ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದವು. ಆ ಕ್ಷಣದಲ್ಲಿ ವಾಹನಗಳಲ್ಲಿ ಪ್ರಯಾಣಿಕರು ಇರದ ಕಾರಣ ದೊಡ್ಡ ಮಟ್ಟದ ಪ್ರಾಣಹಾನಿ ತಪ್ಪಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
14 ಕಿಲೋಮೀಟರ್‌ಗಳು ಪೊಲೀಸರ ಚೇಸ್
ಅಪಘಾತದ ನಂತರವೂ ಕಂಟೈನರ್ ಚಾಲಕ ವಾಹನ ನಿಲ್ಲಿಸದೆ ವೇಗವಾಗಿ ಪರಾರಿಯಾಗಲು ಯತ್ನಿಸಿದ್ದಾನೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕಂಟೈನರ್ ಅನ್ನು ಸತತ 14 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿದ್ದಾರೆ. ಆದರೂ ಚಾಲಕ ನಿಯಂತ್ರಣವಿಲ್ಲದೆ ಲಾರಿಯನ್ನು ಚಲಾಯಿಸುತ್ತಲೇ ಇದ್ದನು.
ಇದನ್ನೂ ಓದಿ: ಬೆಂಗಳೂರು ಕರೆಂಟ್ ಕಟ್: 2 ದಿನ 80ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ! ಏರಿಯಾ ಲಿಸ್ಟ್ ಇಲ್ಲಿದೆ
ಸಾರ್ವಜನಿಕರ ಆಕ್ರೋಶ
ಹೊಸೂರು ಹೆದ್ದಾರಿಯ ಚಂದಾಪುರ ಭಾಗ ತಲುಪುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಕಂಟೈನರ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಚಾಲಕನಿಗೆ ಗಾಯಗಳಾಗಿದ್ದು, ಅನಿವಾರ್ಯವಾಗಿ ಲಾರಿಯನ್ನು ನಿಲ್ಲಿಸಿದ್ದಾನೆ. ಕೆಳಗಿಳಿದ ಚಾಲಕನಿಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ.
ತನಿಖೆ ಮುಂದುವರಿಕೆ
ಸಾರ್ವಜನಿಕರ ದಾಳಿಯಿಂದ ಗಂಭೀರ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತಕ್ಕೆ ಮದ್ಯಪಾನ ಕಾರಣವೇ? ಅಥವಾ ನಿರ್ಲಕ್ಷ್ಯ ಚಾಲನೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
ಮಳೆ ಜೊತೆ ಮೈ ನಡುಗಿಸುವ ಚಳಿ! ಬೆಂಗಳೂರು ಸೇರಿ 2 ದಿನಗಳ ಕರ್ನಾಟಕ ಹವಾಮಾನ ಮುನ್ಸೂಚನೆ ಹೀಗಿದೆ
Read the story
ಇನ್ನು ಮೂರೇ ದಿನ ಗಡುವು! ನವೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಹೊಸ ನಿಯಮ
Read the story
ರೈತರಿಗೆ ಅನುಗ್ರಹ ಯೋಜನೆ ಹಣ ಬಿಡುಗಡೆ! ಬಾಕಿ ಉಳಿದಿದ್ದ ಪರಿಹಾರ ಮೊತ್ತ ಖಾತೆಗೆ ಜಮಾ
Read the story
ಇನ್ನು 2 ದಿನಗಳಲ್ಲಿ ರೈತರ ಖಾತೆಗೆ 2 ಸಾವಿರ ಜಮಾ; ಗುಡ್ ನ್ಯೂಸ್ ಕೊಟ್ಟ ಮೋದಿಜಿ
Read the story



