ಶಿಕ್ಷಕರ ಮುಷ್ಕರ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡಿ ನ್ಯಾಯ ದೊರಕಿಸಲು ಕ್ರಮ; ಸಚಿವ ಆರ್ ಅಶೋಕ್

ಶಿಕ್ಷಕರ ಮುಷ್ಕರ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡಿ ನ್ಯಾಯ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಸಚಿವ ಅಶೋಕ್ ತಿಳಿಸಿದರು.

ಬೆಂಗಳೂರು (ಬಾಗಲಕೋಟೆ): ಶಿಕ್ಷಕರ ಮುಷ್ಕರ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡಿ ನ್ಯಾಯ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಸಚಿವ ಆರ್ ಅಶೋಕ್ ತಿಳಿಸಿದರು.

ಬಾಗಲಕೋಟೆಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ನಡೆಸಿದ ಸಂದರ್ಶನದಲ್ಲಿ ಕಂದಾಯ ಸಚಿವ ಅಶೋಕ್ ಮಾತನಾಡಿದರು.

ನ್ಯಾಯ ದೊರಕಿಸಲು ಕ್ರಮ

ಹಳೆಯ ಪಿಂಚಣಿ ಯೋಜನೆ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆ ಈಡೇರಿಕೆಗಾಗಿ ನಿವೃತ್ತ ಶಿಕ್ಷಕರೊಬ್ಬರು ಆತ್ಮಹತ್ಯೆ ನಿರ್ಧಾರ ಕೈಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಶಿಕ್ಷಕರ ಮುಷ್ಕರ ನನ್ನ ಇಲಾಖೆಗೆ ಸಂಬಂಧಿಸಿದ್ದಲ್ಲ.

ಶಿಕ್ಷಕರ ಮುಷ್ಕರ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡಿ ನ್ಯಾಯ ದೊರಕಿಸಲು ಕ್ರಮ; ಸಚಿವ ಆರ್ ಅಶೋಕ್ - Kannada News

ಆದರೆ, ಈ ಕುರಿತು ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಮಾತನಾಡುತ್ತಿದ್ದೇನೆ. ಪ್ರತಿಭಟನೆಯಲ್ಲಿ ನಿರತರಾಗಿರುವ ಶಿಕ್ಷಕರನ್ನು ಮಾತನಾಡಿಸಿ ಅವರಿಗೆ ನ್ಯಾಯ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಯಾವತ್ತೂ ಜನರಿಗೆ ಸುಳ್ಳು ಭರವಸೆ ನೀಡಿಲ್ಲ. ಹುಸಿ ಭರವಸೆಗಳನ್ನು ನಮ್ಮ ಪಕ್ಷ ಯಾವತ್ತೂ ಹೇಳಿಲ್ಲ.

ಜನರನ್ನು ವಂಚಿಸುವ ಕಾರ್ಯ

ಕರ್ನಾಟಕ ಮತ್ತು ದೇಶದಲ್ಲಿ 50 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿದೆ. ಆಗ ಯಾವುದೇ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈಗ ಮತ್ತೆ 5 ವರ್ಷ ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ಕಾಂಗ್ರೆಸ್ ಪ್ರಚಾರ ಮಾಡುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಿಳೆಯರಿಗೆ ಮಾಸಿಕ 1000 ರೂ. ಜೊತೆಗೆ ಮಹಿಳೆಯರಿಗೆ ಉಚಿತ ಬಸ್ ಪಾಸ್, ರೈತರು ಮತ್ತು ಚಾಲಕರ ಮಕ್ಕಳಿಗೆ ಶಿಕ್ಷಣ ಕಾರ್ಯಕ್ರಮಗಳು ನೀಡಿದ್ದಾರೆ. ನಾವು ಕಾಂಗ್ರೆಸ್ ಹಾಗೆ ಕೇವಲ ಬಾಯಿ ಮಾತಿಗೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಮಾಡಿದ ನಂತರ ಹೇಳುತ್ತೇವೆ, ಮಾಡುವುದನ್ನೇ ಹೇಳುತ್ತೇವೆ ಎಂದು ಆರ್ ಅಶೋಕ್ ಹೇಳಿದರು.

Minister R Ashok said that he will talk to the Education Minister about the teachers strike and take steps to get justice

Follow us On

FaceBook Google News

Advertisement

ಶಿಕ್ಷಕರ ಮುಷ್ಕರ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡಿ ನ್ಯಾಯ ದೊರಕಿಸಲು ಕ್ರಮ; ಸಚಿವ ಆರ್ ಅಶೋಕ್ - Kannada News

Minister R Ashok said that he will talk to the Education Minister about the teachers strike and take steps to get justice

Read More News Today