ಮಗಳ ಲಗ್ನಪತ್ರಿಕೆ ಹಂಚಲು ತೆರಳಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿ ಗಂಭೀರ
ಮಗಳ ಮದುವೆಯ ಸಿದ್ಧತೆಯಲ್ಲಿ ತೊಡಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು (Bengaluru): ಮಗಳ ಮದುವೆಗಾಗಿ ಮನೆಮನೆಗೆ ಲಗ್ನಪತ್ರಿಕೆ (Wedding Invitations) ಹಂಚುತ್ತಿದ್ದ ದಂಪತಿಯ ಬದುಕಿನಲ್ಲಿ ವಿಧಿ ಕ್ರೂರ ಆಟವಾಡಿದೆ. ಸಂಬಂಧಿಕರಿಗೆ ಮದುವೆ ಆಹ್ವಾನ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ (Accident) ತಾಯಿ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮದುರೆ ಹೋಬಳಿಯ ಉದ್ದಿಚಿಕ್ಕನಹಳ್ಳಿ ನಿವಾಸಿ ಲಕ್ಷ್ಮೀ ದೇವಿ ಅಲಿಯಾಸ್ ದೇವಮ್ಮ (42) ಎಂದು ಗುರುತಿಸಲಾಗಿದೆ. ಅವರ ಪತಿ ವಿಜಯ್ ಕುಮಾರ್ (48) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ನವೆಂಬರ್ 26 ಮತ್ತು 27ರಂದು ಪುತ್ರಿ ಇಂದ್ರಾಣಿಯ ಮದುವೆ ನಿಗದಿಯಾಗಿತ್ತು. ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂಬ ಆಸೆಯಿಂದ ವಿಜಯ್ ಕುಮಾರ್ ಸಾಲ ಮಾಡಿ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಕಳೆದ ಒಂದು ವಾರದಿಂದ ದಂಪತಿ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಿಗೆ ತೆರಳಿ ಮದುವೆ ಪತ್ರಿಕೆ ಹಂಚುತ್ತಿದ್ದರು.
ಶುಕ್ರವಾರವೂ ನೆಲಮಂಗಲದಲ್ಲಿರುವ ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ನೀಡಲು ಹೊರಟಿದ್ದಾಗ ಹಿಂಬದಿಯಿಂದ ಬಂದ ಸಿಮೆಂಟ್ ಲಾರಿ (Cement Lorry) ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದಿದ್ದು, ದೇವಮ್ಮ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ಅವರ ಕಾಲುಗಳ ಮೇಲೂ ಲಾರಿ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದೇವಮ್ಮ ಅವರ ಮೃತದೇಹವನ್ನು ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ನಡೆಯುತ್ತಿದೆ.
ಮಗಳ ಮದುವೆಯ ಸಂಭ್ರಮಕ್ಕೆ ಸಿದ್ಧವಾಗುತ್ತಿದ್ದ ಮನೆಯಲ್ಲಿ ಈಗ ದುಃಖ ಆವರಿಸಿದೆ. ಮದುವೆ ಆಹ್ವಾನ ಪತ್ರಿಕೆ ಹಂಚುತ್ತಿದ್ದ ತಾಯಿಯೇ ಇಲ್ಲವಾಗಿರುವುದು ಕುಟುಂಬಸ್ಥರು ಮತ್ತು ಸಂಬಂಧಿಕರನ್ನು ಕಣ್ಣೀರಿನಲ್ಲಿ ಮುಳುಗಿಸಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.
ನಾಳೆಯ ದಿನ ಭವಿಷ್ಯ: 14-11-2026, ಶನಿವಾರ
Read the story
ಚಿನ್ನದ ಬೆಲೆ ಮತ್ತೆ ಕುಸಿತ; ಮಹಿಳೆಯರಿಗೆ ಬಂಪರ್ ಸುದ್ದಿ
Read the story
ಸ್ವಂತ ಫಾಸ್ಟ್ ಫುಡ್ ಸೆಂಟರ್ ಶುರು ಮಾಡಬೇಕಾ? ಇಲ್ಲಿದೆ ಉಚಿತ ತರಬೇತಿ
Read the story
ಡಾ.ರಾಜ್ ಕುಮಾರ್ ರನ್ನು ಸ್ಮರಿಸಿದ ಪ್ರಧಾನಿ ಮೋದಿ
Read the story
ಫ್ಯಾಮಿಲಿಗೆ ಬೆಸ್ಟ್, 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳು ಇವು
Read the story




