ಬೆಂಗಳೂರು: ಮುಡಾ ಪ್ರಕರಣ, ವಿಚಾರಣೆಗೆ ಬರಬೇಕು..! ಸಿಎಂ ಸಿದ್ದರಾಮಯ್ಯಗೆ ನೋಟಿಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.
ಬೆಂಗಳೂರು (Bengaluru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಪ್ರಕರಣ ಕರ್ನಾಟಕದಲ್ಲಿ (Karnataka) ರಾಜಕೀಯ ಸಂಚಲನ ಮೂಡಿಸಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.
ಬುಧವಾರ (ನ.6) ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್‌ನಲ್ಲಿ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನೊಂದೆಡೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
”ಮುಡಾಕ್ಕೆ ಸಂಬಂಧಿಸಿದಂತೆ ಮೈಸೂರು (Mysore) ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತರ ವಿಚಾರಣೆಗೆ ಹೋಗುವುದಾಗಿ ತಿಳಿಸಿದರು. ಮೈಸೂರಿನ ಲೋಕಾಯುಕ್ತ ಪೊಲೀಸರು ಸೆ.27ರಂದು ಎಫ್ ಐಆರ್ ದಾಖಲಿಸಿದ್ದರು.
Mysore Lokayukta Police issued a notice to CM Siddaramaiah