ಹೊಸ ಬಿಪಿಎಲ್‌ ಕಾರ್ಡ್‌ಗಾಗಿ ಕಾಯುತ್ತಿದ್ದವರಿಗೆ ಭರ್ಜರಿ ಸಿಹಿಸುದ್ದಿ! ಬಿಗ್ ಅಪ್ಡೇಟ್

ರಾಜ್ಯದಲ್ಲಿ ನಕಲಿ ಬಿಪಿಎಲ್‌ ಕಾರ್ಡ್‌ಗಳ ರದ್ದುಪಡಿಸುವ ಕಾರ್ಯ ಮುಂದುವರೆದಿದ್ದು, ಹೊಸ ಬಿಪಿಎಲ್‌ ಕಾರ್ಡ್‌ಗಾಗಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ.ಎಚ್‌. ಮುನಿಯಪ್ಪ ಭರವಸೆ ನೀಡಿದ್ದಾರೆ.

BPL Ration Card: ರಾಜ್ಯದಲ್ಲಿ ಅನರ್ಹರು ನಕಲಿ ದಾಖಲೆಗಳ ಮೂಲಕ ಬಿಪಿಎಲ್ ಕಾರ್ಡ್ ಪಡೆದಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ.

ಇಂತಹ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅವರಿಗೆ ಎಪಿಎಲ್ ವರ್ಗಕ್ಕೆ ಸ್ಥಳಾಂತರ ಮಾಡುವ ಕಾರ್ಯ ಆಹಾರ ಇಲಾಖೆ ವತಿಯಿಂದ ಮುಂದುವರೆದಿದೆ.

ಈ ನಡುವೆ, ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಕಾಯುತ್ತಿರುವ ಅರ್ಹ ಕುಟುಂಬಗಳಿಗೆ ರಾಜ್ಯ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅವರು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಅರ್ಹತೆಯ ಮಾನದಂಡಗಳನ್ನು ಪೂರೈಸಿದ ಪ್ರತಿಯೊಬ್ಬರಿಗೂ ಹೊಸ ಬಿಪಿಎಲ್ ಪಡಿತರ ಚೀಟಿ ನೀಡಲಾಗುವುದು ಎಂದು ಹೇಳಿದರು.

ಹೋಸ ಪಡಿತರ ಚೀಟಿಗಾಗಿ ರಾಜ್ಯದಾದ್ಯಂತ ಸಾವಿರಾರು ಕುಟುಂಬಗಳು ಕಾಯುತ್ತಿವೆ. ಸರ್ಕಾರವು 2022ರ ನಂತರ ಹೊಸ ಅರ್ಜಿಗಳನ್ನು ಆಹ್ವಾನಿಸದೇ ಇರುವುದು ಕಾರಣದಿಂದಾಗಿ ಜನರಲ್ಲಿ ಅಸಮಾಧಾನ ಇತ್ತು. ಈ ಅವಧಿಯಲ್ಲಿ ಕೇವಲ ಕಾರ್ಡ್ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ಹೆಸರು ಬದಲಾವಣೆ ಮತ್ತು ಕೆವೈಎಸ್ಸಿಗೆ ಮಾತ್ರ ಅವಕಾಶ ನೀಡಲಾಗಿತ್ತು.

BPL Ration Card

ಇದೀಗ ಹೊಸ ಕಾರ್ಡ್ ವಿತರಣೆಯ ಪ್ರಕ್ರಿಯೆ ಪುನರಾರಂಭವಾಗಲಿದೆ. ಪ್ರತೀ ವಾರ ಅಥವಾ 15 ದಿನಗಳಿಗೊಮ್ಮೆ ಜನರು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಪಡೆಯುತ್ತಿದ್ದಾರೆ. ಸರ್ವರ್ ಸಮಸ್ಯೆ ಇದ್ದರೂ ಸಹ ಜನರು ಅಪಾರ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ.

ಕಾಯುತ್ತಿದ್ದವರು ತಮ್ಮ ಅರ್ಜಿಯ ಸ್ಥಿತಿ ತಿಳಿಯಲು ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳು ವಿವರ ನೀಡುವಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರು ಮಾತನಾಡಿ, “ಅರ್ಹತೆ ಹೊಂದಿರುವ ಎಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ನೀಡಲಾಗುವುದು. ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅವರನ್ನು ಎಪಿಎಲ್ ಪಟ್ಟಿಗೆ ವರ್ಗಾಯಿಸಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳು ಅಥವಾ ತೆರಿಗೆದಾರರು ಬಿಪಿಎಲ್ ಕಾರ್ಡ್ ಪಡೆದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಬಿಪಿಎಲ್ ಕಾರ್ಡ್‌ ಪಡೆಯಲು ಅಗತ್ಯ ಅರ್ಹತೆಗಳು:

  • ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ₹1.2 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಮನೆ ಇರಬಾರದು.
  • 3 ಹೆಕ್ಟೇರ್‌ಗಿಂತ (7.5 ಎಕರೆ) ಹೆಚ್ಚು ಕೃಷಿ ಭೂಮಿ ಇರಬಾರದು.
  • 4 ಚಕ್ರದ ವಾಹನ ಅಥವಾ ಆದಾಯ ತೆರಿಗೆ ಪಾವತಿಸಬಾರದು.
  • ಮಾಸಿಕ ವಿದ್ಯುತ್ ಬಿಲ್ ₹450 ಕ್ಕಿಂತ ಹೆಚ್ಚು ಇರಬಾರದು.

ಸರ್ಕಾರವು ಬಡ ಕುಟುಂಬಗಳಿಗೆ ನಿಜವಾದ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಅರ್ಹರಿಗೆ ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂಬ ಭರವಸೆ ಸಚಿವರಿಂದ ಬಂದಿದೆ.

New BPL Card Distribution Soon, Says Minister K H Muniyappa

Related Stories