ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ! ಬಿಗ್ ಅಪ್ಡೇಟ್
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮುಂದಾಳತ್ವದಲ್ಲಿ ಹೊಸ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೊಂಡಿದೆ. ಈ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ ಇಡಲಾಗಿದೆ.

- ಗೃಹಲಕ್ಷ್ಮಿ ಸಹಕಾರ ಸಂಘ ಪ್ರಾರಂಭ
- ಮಹಿಳಾ ಸಬಲೀಕರಣಕ್ಕಾಗಿ ಹೊಸ ಯೋಜನೆಗೆ ಚಾಲನೆ
- ಫಲಾನುಭವಿಗಳಿಗೆ ₹3 ಲಕ್ಷದವರೆಗೆ ಸಾಲ ಸೌಲಭ್ಯ
ಬೆಂಗಳೂರು (Bengaluru): ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆಶಾದೀಪದಂತಿರುವ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಇದೀಗ ಮತ್ತೊಂದು ಹಂತಕ್ಕೆ ಕಾಲಿಟ್ಟಿದೆ. ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಂದಾಗಿದ್ದು, “ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ” ಸ್ಥಾಪನೆಯಾಗಿದೆ.
ಇದಕ್ಕೆ ಸಂಬಂಧಿಸಿದ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಹಕಾರ ಇಲಾಖೆಯ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಅವರು ವಿಧಿ ಪೂರ್ಣಗೊಂಡ ಪ್ರಮಾಣಪತ್ರವನ್ನು ಸಚಿವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಬಿಕ್ಕಟ್ಟು, ಲಕ್ಷಾಂತರ ಹೆಸರು ಡಿಲೀಟ್! ನಿಮ್ಮ ಕಾರ್ಡ್ ಸ್ಥಿತಿ ಏನು? ಚೆಕ್ ಮಾಡಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾತನಾಡಿ, “ಗೃಹಲಕ್ಷ್ಮಿ ಯೋಜನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಈ ಸಹಕಾರ ಸಂಘ ದೊಡ್ಡ ಹೆಜ್ಜೆ. ಇದರ ಮೂಲಕ ಫಲಾನುಭವಿಗಳಿಗೆ 3 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ (Loan) ದೊರೆಯಲಿದೆ. ಇದರಿಂದ ಮಹಿಳೆಯರು ಸ್ವಾವಲಂಬಿಯಾಗಲು ಸಹಕಾರಿ ಆಗುತ್ತದೆ” ಎಂದು ಹೇಳಿದರು.
ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಈಗಾಗಲೇ ರಾಜ್ಯದ 1.24 ಕೋಟಿ ಮಹಿಳೆಯರ ಜೀವನವನ್ನು ಬದಲಾಯಿಸಿದೆ. ಇದುವರೆಗೂ ₹52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಅನ್ನಭಾಗ್ಯದ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ, ಸರ್ಕಾರದ ಹೊಸ ಆದೇಶ
ಇದೀಗ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಮೂಲಕ ಮಹಿಳೆಯರು ತಮ್ಮ ಹಣವನ್ನು ಹೂಡಿಕೆ ಮಾಡಿ, ಹೊಸ ಆದಾಯದ ಮಾರ್ಗಗಳನ್ನು ಕಂಡುಕೊಳ್ಳುವ ಅವಕಾಶ ಸಿಕ್ಕಿದೆ.
ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ! ಗಾಳಿ-ಗುಡುಗು ಸಹಿತ ಮಳೆ ಸಾಧ್ಯತೆ
ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಅದೇ ವೇಳೆ, ಮಹಿಳೆಯರ ಸುರಕ್ಷತೆಗಾಗಿ “ಅಕ್ಕಾಪಡೆ” ಯೋಜನೆಯನ್ನೂ ಬಲಪಡಿಸುತ್ತಿರುವುದಾಗಿ ತಿಳಿಸಿದರು. ಸಭೆಯ ಕೊನೆಯಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮೀಪತಯ್ಯ ಅವರಿಗೆ ಗೌರವ ಸಲ್ಲಿಸಲಾಯಿತು.
New Cooperative Society for Gruha Lakshmi Beneficiaries
ಗೃಹಲಕ್ಷ್ಮಿ ಯೋಜನೆಯ ಹೊಸ ಲಿಸ್ಟ್ ಸಿದ್ದ; ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸಿಗುತ್ತೆ ಹಣ!
Read the story
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
10 ಲಕ್ಷ ಮಂದಿ ರೈತರಿಗೆ ಪಿಎಂ ಕಿಸಾನ್ ಯೋಜನೆ ಹಣ ಸ್ಥಗಿತ! ಕೇಂದ್ರದ ಶಾಕಿಂಗ್ ನಿರ್ಧಾರ
Read the story
ಕರ್ನಾಟಕ SSLC ವಿದ್ಯಾರ್ಥಿಗಳು ಹಾಗೂ ಶಾಲೆಗಳಿಗೆ KSEAB ಮಹತ್ವದ ಸೂಚನೆ! ತಪ್ಪದೇ ಗಮನಿಸಿ
Read the story
ಕರ್ನಾಟಕ ರಾಜ್ಯದಲ್ಲಿ ಅಕ್ಕಿ ಬೆಲೆ ಗಗನಕ್ಕೆ; ಕೆಜಿಗೆ ₹20 ರೂಪಾಯಿ ಏರಿಕೆ! 4 ತಿಂಗಳಲ್ಲಿ ಶೇ 30ರಷ್ಟು ಹೆಚ್ಚಳ
Read the story




