Bangalore NewsKarnataka News

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಸರ್ಕಾರದಿಂದ ಹೊಸ ಅಪ್ಡೇಟ್! ಇಲ್ಲಿದೆ ಡೀಟೇಲ್ಸ್

Apply Ration Card : ಈಗ ನಮ್ಮ ರಾಜ್ಯದಲ್ಲಿ ಜಾರಿಗೆ ಬಂದಿರುವ ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಲು ಹಾಗೆಯೇ ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಬಿಪಿಎಲ್ ರೇಶನ್ ಕಾರ್ಡ್ (BPL Ration Card) ಇರಲೇಬೇಕು.

ಹಲವಾರು ಜನರ ಬಳಿ ರೇಷನ್ ಕಾರ್ಡ್ ಇಲ್ಲದೇ ಸರ್ಕಾರದ ಯಾವುದೇ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಿಲ್ಲ. ಅಂಥವರು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಈ ಬಗ್ಗೆ ಈಗ ಸರ್ಕಾರದ ಕಡೆಯಿಂದ ಹೊಸ ಅಪ್ಡೇಟ್ ಸಿಕ್ಕಿದೆ.

Big update from the government regarding new ration card application and Correction

ರಾಜ್ಯ ಸರ್ಕಾರವು ಜನರು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ಈಗಿರುವ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಲು ಈಗಾಗಲೇ ಕೆಲವು ಸಾರಿ ಅವಕಾಶ ಕೊಟ್ಟಿತು, ಆದರೆ ಸರ್ವರ್ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಂದ ಎಲ್ಲರೂ ಕೂಡ ರೇಷನ್ ಕಾರ್ಡ್ ಅಪ್ಡೇಟ್ ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.

ಉಚಿತ ಕರೆಂಟ್ ಇದ್ದು ಬಾಡಿಗೆ ಮನೆ ಬದಲಿಸಿದರೆ ಇನ್ಮುಂದೆ ಹೊಸ ರೂಲ್ಸ್! ಯೋಜನೆಯಲ್ಲಿ ಬದಲಾವಣೆ

ಇನ್ನಷ್ಫು ಜನರು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸಾಧ್ಯವೂ ಆಗಿಲ್ಲ. ಈ ಬಗ್ಗೆ ಆಹಾರ ಇಲಾಖೆಯ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತ ಮೊದಲೇ, ಸುಮಾರು 2.38 ಲಕ್ಷ ಜನರು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯುವುದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂಥವರಿಗೆ ಇನ್ನು ಕೂಡ ರೇಷನ್ ಕಾರ್ಡ್ ವಿತರಣೆ ಆಗಿಲ್ಲ. ಹಾಗಾಗಿ ಅವರಿಗೆಲ್ಲ ರೇಷನ್ ಕಾರ್ಡ್ ವಿತರಣೆ ಆಗುವವರೆಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ. ಆದರೆ ಮತ್ತೊಂದು ಸುದ್ದಿ ಕೂಡ ಇದೆ.

ಜೂನ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮೆ ಆಗಿದ್ದು, ನಿಮಗೂ ಬಂದಿದ್ಯಾ ಈ ರೀತಿ ಚೆಕ್ ಮಾಡಿ

Ration Cardಪ್ರಸ್ತುತ ಹಳೆಯ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು, ಜೂನ್ ತಿಂಗಳ ಕೊನೆಯ ವಾರ ಅಥವಾ ಜುಲೈ ತಿಂಗಳ ಮೊದಲ ವಾರದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಹೊಸ ರೇಷನ್ ಕಾರ್ಡ್ ವಿತರಣೆ ನಡೆಯಲಿದೆ.

ಅದಾದ ಬಳಿಕ ಮತ್ತೊಮ್ಮೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ಗುಡ್ ನ್ಯೂಸ್ ಕೊಡಲಿದ್ದು, ಈ ಕೆಲವು ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಂಡರೆ, ಸರ್ಕಾರದಿಂದ ಅಧಿಕಸೂಚನೆ ಬಿಡುಗಡೆ ಆಗುತ್ತಿದ್ದ ಹಾಗೆ ಅರ್ಜಿ ಸಲ್ಲಿಸಬಹುದು.

ಉಚಿತ ಮನೆ ಭಾಗ್ಯ! ಬಡವರು ಸ್ವಂತ ಮನೆ ಕಟ್ಟಿಕೊಳ್ಳಲು 6.50 ಲಕ್ಷ ಸರ್ಕಾರದ ಸಹಾಯಧನ; ಅರ್ಜಿ ಸಲ್ಲಿಸಿ

ಅಗತ್ಯವಿರುವ ದಾಖಲೆಗಳು:

*ಆಧಾರ್ ಕಾರ್ಡ್
*ಬರ್ತ್ ಸರ್ಟಿಫಿಕೇಟ್
*ಕ್ಯಾಸ್ಟ್ ಸರ್ಟಿಫಿಕೇಟ್
*ಇನ್ಕಮ್ ಸರ್ಟಿಫಿಕೇಟ್
*ಫೋನ್ ನಂಬರ್
*ಪಾಸ್ ಪೋರ್ಟ್ ಸೈಜ್ ಫೋಟೋ

ಈ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು, ತಿದ್ದುಪಡಿಗೆ (Correction) ಅರ್ಜಿ ಹಾಕಲು ಸಾಧ್ಯ ಆಗುತ್ತದೆ. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

New update from the government for applicants to get a new ration card

Our Whatsapp Channel is Live Now 👇

Whatsapp Channel

Related Stories