ಇನ್ನೆರಡು ದಿನಗಳಲ್ಲಿ ಪೆಂಡಿಂಗ್ ಗೃಹಲಕ್ಷ್ಮಿ ಹಣ ಬಿಡುಗಡೆ, ವರಮಹಾಲಕ್ಷ್ಮಿ ಹಬ್ಬಕ್ಕೆ ಗುಡ್ ನ್ಯೂಸ್!

ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್! ಖುದ್ದು ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಮದುವೆ ಆಗಿ, ಸಂಸಾರದ ಜವಾಬ್ದಾರಿ ಹೊತ್ತಿರುವ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ ಆಗಿದೆ. ಈ ಒಂದು ಯೋಜನೆಯ ಮೂಲಕ ಮಹಿಳಾ ಮಣಿಯರಿಗೆ ಪ್ರತಿ ತಿಂಗಳು ₹2000 ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ (Bank Account) ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿತ್ತು.

ಅದೇ ರೀತಿ ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme) ಜಾರಿಗೆ ತರಲಾಯಿತು. ಸರ್ಕಾರ ಜಾರಿಗೆ ತಂದ 5 ಗ್ಯಾರೆಂಟಿ ಯೋಜನೆಗಳ ಪೈಕಿ, ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು ಎಂದರೆ ತಪ್ಪಲ್ಲ..

ಈ ಒಂದು ಯೋಜನೆಯನ್ನು ರಾಜ್ಯದಲ್ಲಿ ಅರ್ಹತೆ ಹೊಂದಿರುವ ಎಲ್ಲಾ ಮಹಿಳೆಯರಿಗೆ ತಲುಪಿಸಬೇಕು ಎನ್ನುವ ಉದ್ದೇಶ ಸರ್ಕಾರದ್ದಾಗಿತ್ತು. ಅದೇ ರೀತಿ ಸುಮಾರು 1.18 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅಪ್ಲೈ ಮಾಡಿದ್ದರು ಸಹ ಎಲ್ಲರಿಗೂ ಈ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ. ಇದಕ್ಕೆ ಕೆಲವು ತಾಂತ್ರಿಕ ದೋಷಗಳು, ಹಾಗೂ ಡಾಕ್ಯುಮೆಂಟ್ ಗಳಲ್ಲಿ ಇರುವ ತಪ್ಪುಗಳು ಕಾರಣ ಇರಬಹುದು ಎಂದು ಸರ್ಕಾರ ಮಾಹಿತಿ ನೀಡಿದೆ..

Gruha Lakshmi money received only 2,000, Update About Pending Money

ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ಯಾ ಇಲ್ವಾ? ಈ ರೀತಿಯಾಗಿ ಮೊಬೈಲ್‌ನಲ್ಲೇ ಚೆಕ್ ಮಾಡಿ

ಆದರೆ ಇಲ್ಲಿ ಗಮನಿಸಬೇಕಾದ ಮತ್ತೊಂದು ಪ್ರಮುಖವಾದ ವಿಷಯ ಏನು ಎಂದರೆ, ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆ ಏನೋ ಚಾಲನೆ ಆಯಿತು, ಈ ವರ್ಷ ಮೇ ತಿಂಗಳ ವರೆಗು 10 ಕಂತುಗಳ ಹಣ ಒಂದಷ್ಟು ಮಹಿಳೆಯರನ್ನು ಸಹ ತಲುಪಿತು (Money Transfer).

ಆದರೆ ಜೂನ್ ಮತ್ತು ಜುಲೈ ತಿಂಗಳ ಹಣ ಇನ್ನು ಕೂಡ ಬಿಡುಗಡೆ ಆಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ತಮಗೆ ಈ ಯೋಜನೆಯ ಹಣ ಸಿಗುತ್ತಾ ಇಲ್ಲವಾ ಎಂದು ತಲೆಕೆಡಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯರು ಸರ್ಕಾರದ ಕಡೆಯಿಂದ ಮಾಹಿತಿ ಕೇಳಿದ್ದರು..

ಪ್ರಸ್ತುತ ಸಿಕ್ಕಿರುವ ಮಾಹಿತಿಯ ಅನುಸಾರ, ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಹಿಂದೆ ಕೆಲವು ಬಾರಿ ಅಪ್ಡೇಟ್ ಕೊಟ್ಟಿದ್ದರು. ಆದಷ್ಟು ಬೇಗ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಯನ್ನು ತಲುಪುತ್ತದೆ ಎಂದು ತಿಳಿಸಿದ್ದರು.

ಆದರೆ ಆಗಸ್ಟ್ ತಿಂಗಳು ಶುರುವಾದರು ಇನ್ನು ಕೂಡ ಜೂನ್ ಮತ್ತು ಜುಲೈ ತಿಂಗಳ ಹಣ ಬಂದಿಲ್ಲ. ಈ ಕಾರಣಕ್ಕೆ ಮಹಿಳೆಯರ ಆತಂಕ ಜಾಸ್ತಿ ಆಗಿತ್ತು, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಅವರೇ ಭರವಸೆ ಕೊಟ್ಟಿದ್ದಾರೆ. ಹೌದು, ಕೊಡಗಿನಲ್ಲಿ ಆಗುತ್ತಿರುವ ಮಳೆಯ ಹಾನಿ ಪರಿಶೀಲನೆ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿದ್ದಾರೆ..

ಹೌದು, ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ಮಾತಿನ ಅನುಸಾರ, ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಮೇ ಮತ್ತು ಜೂನ್ ತಿಂಗಳ ಹಣ ಬಿಡುಗಡೆ ಆಗುವುದಕ್ಕೆ ತಡ ಆಗುತ್ತಿದ್ದು, ಶೀಘ್ರದಲ್ಲೇ ಈ ಕೆಲಸ ನಡೆಯುತ್ತದೆ. ಯಾವುದೇ ಮಹಿಳೆಗೂ ಕೂಡ ಸಮಸ್ಯೆ ಆಗುವುದಿಲ್ಲ,

ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡಿದೆ, ಮುಂದೆ ಈ ಯೋಜನೆ ನಿಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮಹಿಳೆಯರು, ಇನ್ನು ಎರಡು ದಿನಗಳಲ್ಲಿ ₹4000 ರೂಪಾಯಿಗಳು ನಿಮ್ಮ ಅಕೌಂಟ್ ಗೆ (Bank Account) ಬರುವುದನ್ನು ನಿರೀಕ್ಷಿಸಬಹುದು.

Pending Gruha lakshmi Yojana money release in next two days

Related Stories