ಬೆಂಗಳೂರು ಕಟ್ಟಡ ಕುಸಿತ: ಸಂತ್ರಸ್ತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Story Highlights

ಬೆಂಗಳೂರಿನಲ್ಲಿ ಕಟ್ಟಡ ಕುಸಿತದ ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಬೆಂಗಳೂರಿನಲ್ಲಿ ಕಟ್ಟಡ ಕುಸಿತದ ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ಘೋಷಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಪ್ರಾಣಹಾನಿಯಾಗಿರುವುದು ಬೇಸರ ತಂದಿದೆ. ನನ್ನ ಸಾಂತ್ವಾನ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಇವೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ ಸಂಬಂಧಿಕರಿಗೆ ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ”

ಬೆಂಗಳೂರಿನಲ್ಲಿ ಸುಮಾರು 20 ಕಾರ್ಮಿಕರು ಕೆಲಸ ಮಾಡುತ್ತಿದ್ದ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಎಂಟು ಮಂದಿ ಸಾವನ್ನಪ್ಪಿದ್ದಾರೆ.

PM Modi announces ex-gratia of Rs 2 lakh to next of kin of Bengaluru building collapse victims

[magic_expand]

English Summary :

PM Modi announces ex-gratia of Rs 2 lakh to next of kin of Bengaluru building collapse victims

Prime Minister Narendra Modi announced Rs 2 lakh ex-gratia from Prime Minister’s National Relief Fund (PMNRF) to the victims of the building collapse in Bengaluru.

An ex-gratia of Rs. 2 lakhs from PMNRF would be provided to the next of kin of each deceased. The injured would be given Rs. 50,000.

A six-storeyed under-construction building in Bengaluru collapsed where nearly 20 workers were working.

[/magic_expand]

Related Stories