ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಜಾಮೀನು ರದ್ದುಗೊಳಿಸಲು ಮುಂದಾದ ಪೊಲೀಸರು
ದರ್ಶನ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೋಗಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರುತ್ತಿಲ್ಲ ಎಂದರು.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ, ದೀಪಾವಳಿಗೂ ಮುನ್ನ ಜಾಮೀನು ಪಡೆದಿರುವ ನಟ ದರ್ಶನ್ (Actor Darshan) ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಬೆನ್ನು ನೋವಿನ ಕಾರಣ ಆಪರೇಷನ್ ಮಾಡಿಸಿಕೊಳ್ಳಲು ದರ್ಶನ್ ಗೆ ಹೈಕೋರ್ಟ್ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದ್ದು ಗೊತ್ತೇ ಇದೆ.
ಗೃಹ ಸಚಿವ ಜಿ.ಪರಮೇಶ್ವರ್ ಅವರು, ಜಾಮೀನು ರದ್ದುಗೊಳಿಸುವಂತೆ ಗೃಹ ಸಚಿವಾಲಯದ ಮನವಿಯನ್ನು ಪರಿಗಣಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ದರ್ಶನ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೋಗಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರುತ್ತಿಲ್ಲ ಎಂದರು.
ಇದನ್ನು ಆಧರಿಸಿ ಶೀಘ್ರವೇ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
Police likely to appeal to Supreme Court to cancel actor Darshan’s bail