ದರ್ಶನ್ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ: ಪೊಲೀಸ್ ಆಯುಕ್ತ
ನಟ ದರ್ಶನ್ ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
- ದರ್ಶನ್ಗೆ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ
- ಸರ್ಕಾರದಿಂದ ಅನುಮತಿ ಪಡೆದು, ಪೊಲೀಸರ ಕ್ರಮ
- ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ನ
ಬೆಂಗಳೂರು (Bengaluru): “ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ (Actor Darshan) ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು,” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
“ಮಧ್ಯಂತರ ಜಾಮೀನು ತೆರವಿಗೆ ಸರ್ಕಾರದ ಅನುಮತಿ ಪಡೆದು, ಮುಂದಿನ ಹಂತದಲ್ಲಿ ಕೋರ್ಟ್‌ಗೆ ಮನವಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ,” ಎಂದು ಅವರು ವಿವರಿಸಿದರು.
ಚಿತ್ರದುರ್ಗದಲ್ಲಿ ನಡೆದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ನಟ ದರ್ಶನ್ನನ್ನು ಬಂಧಿಸಲಾಗಿತ್ತು. ಈ ಸಂದರ್ಭ 57ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ಅರ್ಜಿ ನಿರಾಕರಿಸಲಾಯಿತು. ನಂತರ, ದರ್ಶನ್ ಅವರ ಪರ ವಕೀಲರು ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಕ್ಟೋಬರ್ 22ರಂದು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದಾಗ, ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ಅವರ ವಕೀಲರು ಹೇಳಿದ್ದು, ಅವರು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಿದೆ ಎಂಬ ಮಾಹಿತಿ ನೀಡಿದರು. ವೈದ್ಯರು ಸಹ ಅವರಿಗೆ ಸರ್ಜರಿ ಅಗತ್ಯವಿದೆ ಎಂದು ತಿಳಿಸಿದ್ದರು.
ವಾದ ಆಲಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ಹೈಕೋರ್ಟ್ ಪೀಠವು, 30ನೇ ಅಕ್ಟೋಬರ್ ದರ್ಶನ್ ಅವರಿಗೆ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಿ ನೀಡಿತು.
Police to Appeal for Cancellation of Darshan’s Bail in Renukashwamy Murder Case