ಬೆಂಗಳೂರು: 6ರಂದು ಮತ್ತೊಮ್ಮೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ!
ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಆಗಾಗ ಕರ್ನಾಟಕಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ತಿಂಗಳಲ್ಲೇ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರು (Bengaluru): ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ (PM Narendra Modi) ಆಗಾಗ ಕರ್ನಾಟಕಕ್ಕೆ ಭೇಟಿ (Karnataka Visit) ನೀಡುತ್ತಿರುತ್ತಾರೆ. ಈ ತಿಂಗಳಲ್ಲೇ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಹೀಗಿರುವಾಗ ಪ್ರಧಾನಿ ಮೋದಿ ಇದೇ 6ರಂದು ಮತ್ತೆ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅಂದು ಬೆಂಗಳೂರಿಗೆ ಆಗಮಿಸಿ ಇಲ್ಲಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಸಭಾಂಗಣದಲ್ಲಿ ನಡೆಯುವ ಭಾರತ ಇಂಧನ ಸಪ್ತಾಹದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: Kannada Live: ಇಂದಿನ ಪ್ರಮುಖ ಕನ್ನಡ ಸುದ್ದಿಗಳು, ಬ್ರೇಕಿಂಗ್ ನ್ಯೂಸ್ ಲೈವ್ ಮುಖ್ಯಾಂಶಗಳು 31 01 2023
ಸಮಾರಂಭ ಮುಗಿಸಿ ಹೆಲಿಕಾಪ್ಟರ್ ಮೂಲಕ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗ್ರಾಮಕ್ಕೆ ಮೋದಿ ತೆರಳಲಿದ್ದಾರೆ. ಅಲ್ಲಿ ಎಚ್‌ಎಎಲ್ ಕಂಪನಿ ಸ್ಥಾಪಿಸಿರುವ ಹೆಲಿಕಾಪ್ಟರ್ ತಯಾರಿಕಾ ಘಟಕ ದೇಶಕ್ಕೆ ಸಮರ್ಪಿಸಲಾಗುತ್ತದೆ. ಇದೇ ಕಾರ್ಯಕ್ರಮದಲ್ಲಿ ಜಲಜೀವನ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಬೆಂಗಳೂರಿಗೆ (Bangalore) ಬಂದು ಪ್ರತ್ಯೇಕ ವಿಮಾನದಲ್ಲಿ ದೆಹಲಿಗೆ (Delhi) ತೆರಳಲಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅವರು ಭಾಗವಹಿಸುವ ಸ್ಥಳಗಳು ಮತ್ತು ಅವರು ಸಂಚರಿಸುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ.
Prime Minister Modi will visit Karnataka again on 6th
Follow us On
Google News |