ಪುನೀತ್ ಆರೋಗ್ಯ ಗಂಭೀರ… ಏನೂ ಹೇಳಲು ಸಾಧ್ಯವಿಲ್ಲ : ವೈದರು

ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯಾಘಾತಕ್ಕೆ ಏನೇನು ಸಾಧ್ಯವೋ ಎಲ್ಲ ಚಿಕಿತ್ಸೆ ನೀಡುತ್ತಿದ್ದೇವೆ. ಸ್ಥಿತಿ ಗಂಭೀರವಾಗಿದೆ.

🌐 Kannada News :

ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯಾಘಾತಕ್ಕೆ ಏನೇನು ಸಾಧ್ಯವೋ ಎಲ್ಲ ಚಿಕಿತ್ಸೆ ನೀಡುತ್ತಿದ್ದೇವೆ. ಸ್ಥಿತಿ ಗಂಭೀರವಾಗಿದೆ. ಸದ್ಯ ಏನನ್ನೂ ಹೇಳಲು ಸಾಧ್ಯವಿಲ್ಲ. ಮುಂದಿನ ಒಂದು ತಾಸಿನೊಳಗೆ ಅಪ್‌ಡೇಟ್ ನೀಡುತ್ತೇವೆ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ ನಾಯಕ್ ಹೇಳಿದ್ದಾರೆ.

ಬೆಳಿಗ್ಗೆ 11ಕ್ಕೆ ಪುನೀತ್ ಆಸ್ಪತ್ರೆಗೆ ಬಂದರು. ಅವರು ಬರುವಾಗಲೇ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಲಘು ಹೃದಯಾಘಾತದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ವಿಕ್ರಂ ಆಸ್ಪತ್ರೆಗೆ ಬರುವ ವೇಳೆಗಾಗಲೇ ಅವರ ಸ್ಥಿತಿ ಗಂಭಿರವಾಗಿತ್ತು ಎಂದು ಡಾ.ರಂಗನಾಥ್ ಹೇಳಿದ್ದಾರೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today