ನಾಳೆ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ

Puneeth Rajkumar : ಪುನೀತ್ ಸಾವಿನ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ಪುನೀತ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ದರ್ಶನಕ್ಕೆ ಇಡಲಾಗಿದೆ.

Puneeth Rajkumar : ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ ಜಿಮ್ ಮಾಡುವಾಗ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಧಾವಿಸಲಾಗಿತ್ತು. ಈಗಾಗಲೇ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ಸೂಪರ್ ಸ್ಟಾರ್ ಇಮೇಜ್ ಪಡೆದ ಪುನೀತ್ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಪುನೀತ್ ಸಾವಿನ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ಪುನೀತ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ದರ್ಶನಕ್ಕೆ ಇಡಲಾಗಿದೆ.

ನಟ ಪುನೀತ್ ರಾಜ್ ಕುಮಾರ್
ನಟ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ಭಾನುವಾರ ಅವರ ತಂದೆಯ ಸಮಾಧಿ ಬಳಿ ನಡೆಯಲಿದೆ. ಈ ನಡುವೆ ಪುನೀತ್ ಪುತ್ರಿ ವಂದಿತಾ ರಾಜ್ ಕುಮಾರ್ ಸದ್ಯ ಅಮೆರಿಕದಲ್ಲಿದ್ದಾರೆ. ಆಕೆ ಭಾರತಕ್ಕೆ ಬರಲು ವ್ಯವಸ್ಥೆ ಮಾಡಿದ್ದು… ಅವರ ಆಗಮನಕ್ಕೆ ಕಾಯಲಾಗುತ್ತಿದೆ..

ಅಪ್ಪು ಅಂತಿಮ ದರ್ಶನ ಪಡೆಯಲು ಟಾಲಿವುಡ್ ಸ್ಟಾರ್ ಗಳಾದ ಬಾಲಕೃಷ್ಣ, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಹಲವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಇನ್ನೂ ತಂಡೋಪ ತಂಡವಾಗಿ ಬರುತ್ತಲೇ ಇದ್ದಾರೆ.

Stay updated with us for all News in Kannada at Facebook | Twitter
Scroll Down To More News Today