ನಟ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು !

Puneeth Rajkumar Admitted To Hospital : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ ಖಾಸಗಿ ಆಸ್ಪತ್ರೆಗೆ ದಾಖಲು

🌐 Kannada News :

ಬೆಂಗಳೂರು, 29 ಅಕ್ಟೋಬರ್ 2021 : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ (heart attack) ಆದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಸುದ್ದಿ ಬಂದಿದೆ, (Puneeth Rajkumar Admitted To Hospital) ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಇಂದು ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ( ಲಘು ಹೃದಯಾಘಾತ ) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ, ಇನ್ನಷ್ಟು ಮಾಹಿತಿಯನ್ನು ಆದಷ್ಟು ಬೇಗ ಕೊಡುತ್ತೇವೆ….

ಪುನೀತ್ ರಾಜ್ ಕುಮಾರ್ ರವರು ಆಸ್ಪತ್ರೆ ಸೇರಿದ್ದಾರೆ ಎಂಬ ಸುದ್ದಿಯಿಂದ ಅಭಿಮಾನಿಗಳು ಕಂಗಾಲಾಗಿದ್ದಾರೆ. ಪುನೀತ್ ರವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ…

puneeth rajkumar
puneeth rajkumar

update : ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ವೈದ್ಯರ ತಂಡ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದುಬಂದಿದೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್​ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದ್ದು…. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಆಶಿಸೋಣ…

Update – ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ (Bangalore Vikram Hospital) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀತ್ ರಾಜ್ ಕುಮಾರ್ ಅವರಿಗೆ ಇಸಿಜಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿರುವುದಾಗಿ ತಿಳಿದು ಬಂದಿದೆ…

ಪುನೀತ್ ರಾಜ್‌ಕುಮಾರ್ ಶುಕ್ರವಾರ ನಗರದ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಲಘು ಹೃದಯಾಘಾತಕ್ಕೆ ಒಳಗಾದರು ಎಂದು ವರದಿಯಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವರಾಜ್​ಕುಮಾರ್​ ಅವರ ಮಗಳು ಸಹ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಬಳಿ ಒಬ್ಬೊಬ್ಬರಾಗಿ ಅಭಿಮಾನಿಗಳು ಗುಂಪು ಸೇರುತ್ತಿದ್ದಾರೆ…  ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ.

ಡಾ ಶಿವರಾಜ್​ ಕುಮಾರ್ ಅಭಿನಯದ ಭಜರಂಗಿ ಸಿನಿಮಾ ರಿಲೀಸ್​ ಆಗಿರುವ ಹಿನ್ನೆಲೆ, ಶಿವಣ್ಣನವರು ಸಿನಿಮಾ ವಿಷಯದಲ್ಲಿ  ಬ್ಯುಸಿಯಾಗಿದ್ದಾರೆ. ಸದ್ಯ ಅವರಿಗೂ ಸಹ ಮಾಹಿತಿ ತಿಳಿಸಲಾಗಿದ್ದು, ಇಷ್ಟರಲ್ಲೇ ಅವರು ಆಸ್ಪತ್ರೆಯ ಬಳಿ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಳಿಗ್ಗೆ ಅವರು ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಆ ಬಳಿಕ ವಿಕ್ರಂ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ… ಆಸ್ಪತ್ರೆ ಬಳಿಗೆ ರಾಜ್​ ಕುಟುಂಬದವರು ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ನಟ ಯಶ್​ ಸಹ ಆಸ್ಪತ್ರೆಗೆ ತಲುಪಿದ್ದು, ಪುನೀತ್ ಆರೋಗ್ಯದ ಬಗ್ಗೆ ವೈದ್ಯರ ಬಳಿ ವಿಚಾರಿಸಿದ್ದಾರಂತೆ….

Updating …..

ನಟ ಪುನೀತ್ ರಾಜ್ ಕುಮಾರ್
ನಟ ಪುನೀತ್ ರಾಜ್ ಕುಮಾರ್
➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today