ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಹಿನ್ನೆಲೆ ದೊಡ್ಡಬಳ್ಳಾಪುರಕ್ಕೆ ರಾಹುಲ್ ಗಾಂಧಿ ಭೇಟಿ

ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿರುವ ರಾಹುಲ್ ಗಾಂಧಿ ನಾಳೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ವೆಂಕಟರಮಣಯ್ಯ ತಿಳಿಸಿದರು

Online News Today Team

ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿರುವ ರಾಹುಲ್ ಗಾಂಧಿ ನಾಳೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ವೆಂಕಟರಮಣಯ್ಯ ತಿಳಿಸಿದರು

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರಾದ ಟಿ ವೆಂಕಟರಮಣಯ್ಯ ಪ್ರತಿಬಾರಿಯಂತೆ ಈ ಬಾರಿಯೂ ಕೂಡ ರಾಹುಲ್ ಗಾಂಧಿಯವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಅಂಗವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಸಲುವಾಗಿ ಆಗಮಿಸುತ್ತಿದ್ದು ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್ ಗಾಂಧಿಯವರು ದೊಡ್ಡಬಳ್ಳಾಪುರದ ಮೂಲಕ ತುಮಕೂರಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು ಕೋರಲಿದ್ದಾರೆ ಎಂದು ತಿಳಿಸಿದರು

ಕೆಪಿಸಿಸಿ ಸದಸ್ಯರಾದ ಜಿ. ಲಕ್ಷ್ಮಿಪತಿ ಮಾತನಾಡಿ ನಾಳೆ (ಮಾ.31) ಮಧ್ಯಾಹ್ನ 1.30 ರ ವೇಳೆಗೆ ದೊಡ್ಡಬಳ್ಳಾಪುರ ನಗರದ ಟಿಬಿ ವೃತ್ತದಲ್ಲಿ ರಾಹುಲ್ ಗಾಂಧಿಯವರಿಗೆ ದೊಡ್ಡಬಳ್ಳಾಪುರ ಕಾಂಗ್ರೆಸ್ ವತಿಯಿಂದ ಸ್ವಾಗತ ಕೋರಲಾಗುವುದು.

ಕಾರ್ಯಕ್ರಮದಲ್ಲಿ 3000ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಸೇರುವ ಸಂಭವವಿದ್ದು ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪಮೊಯಿಲಿ , ಮಾಜಿ ಸಚಿವರಾದ ಕೃಷ್ಣ ಬೈರೇಗೌಡರು, ವಿಧಾನಪರಿಷತ್ ಸದಸ್ಯರಾದ ಎಸ್. ರವಿ , ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಗಳಾದ ರಣದೀಪ್ ಸಿಂಗ್ ಸುಜ್ರೇವಾಲ ಆಗಮಿಸಲಿದ್ದಾರೆ ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಓಬಿಸಿ ಅಧ್ಯಕ್ಷ ಮಹೇಶ್ ಹಾಗೂ ಹಲವು ಮುಖಂಡರು ,ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಹರೀಶ್, ದೊಡ್ಡಬಳ್ಳಾಪುರ

Follow Us on : Google News | Facebook | Twitter | YouTube