Bengaluru NewsKarnataka News

ಬೆಂಗಳೂರು, ಮೈಸೂರು ಸೇರಿದಂತೆ ಈ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆ

ಬೆಂಗಳೂರು (Bengaluru): ಕಳೆದ ಎರಡು ದಿನಗಳಿಂದ ಮಳೆರಾಯ ಬ್ರೇಕ್ ಕೊಟ್ಟಂತಿದೆ. ದಕ್ಷಿಣ ಕರ್ನಾಟಕ ಮತ್ತು ಕರಾವಳಿಯಲ್ಲಿನ ಭಾರೀ ಮಳೆ (Heavy Rain) ಈಗ ಸಡಿಲವಾಗಿದೆ. ಜೊತೆಗೆ ಈ ವಾರದಲ್ಲಿ, ಕೆಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದು ಗಮನಾರ್ಹ, ಮತ್ತು ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ (dry weather) ಸಂಭವನೀಯತೆ ಇದೆ.

Bengaluru Rain

ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೆಲವೇ ಸ್ಥಳಗಳಲ್ಲಿ ಹಗುರ ಮಳೆಯಾಗುವ (Rain Update) ಸಂಭವವಿದೆ. ಉಳಿದ ರಾಜ್ಯ ಭಾಗಗಳಲ್ಲಿ ಒಣ ವಾತಾವರಣ ಇರುವ ನಿರೀಕ್ಷೆ ಇದೆ.

ಇಂತಹವರಿಗೆ ಮಾತ್ರ ಬಿಪಿಎಲ್‌ ಕಾರ್ಡ್‌ ವಿತರಣೆ ಆರಂಭ; ಅರ್ಜಿ ಸಲ್ಲಿಸುವುದೇಗೆ?

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಲಘು ಮಳೆಯಾದರೆ, ಹಾಸನದಲ್ಲಿಯೂ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಕೆಲವು ಭಾಗಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆಯ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 9ರಿಂದ 11ರ ತನಕ ರಾಜ್ಯಾದ್ಯಾಂತ ಒಣ ವಾತಾವರಣವಾಗಲಿದೆ. ಹಾಗೂ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆಯ ಸೂಚನೆ ಇದೆ.

ಬೆಂಗಳೂರು, ಮೈಸೂರು ಸೇರಿದಂತೆ ಈ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆ
ಬೆಂಗಳೂರು ಮಳೆ

ಬೆಂಗಳೂರು ಮಳೆ

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಕವಿದ ವಾತಾವರಣ ಕಾಣಬಹುದು.

Rain again in some districts this week including Bengaluru, Mysore

Our Whatsapp Channel is Live Now 👇

Whatsapp Channel

Related Stories