ಬೆಂಗಳೂರು ಸೇರಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಹಲವಾರು ಜಿಲ್ಲೆಗಳಲ್ಲಿಅಲರ್ಟ್ ಘೋಷಿಸಲಾಗಿದೆ. ಹವಮಾನ ಇಲಾಖೆಯ ಪ್ರಕಾರ, ಮುಂಬರುವ ದಿನಗಳಲ್ಲಿ ಕೆಲ ಭಾಗಗಳಲ್ಲಿ ಮಳೆ ತಗ್ಗುವ ನಿರೀಕ್ಷೆಯಿದೆ.
Publisher: Kannada News Today (Digital Media)
- ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಬಹುದು ಎಂದು ಹವಮಾನ ಇಲಾಖೆ ಹೇಳಿಕೆ
- ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡಿಗೆ ಯೆಲ್ಲೋ ಎಚ್ಚರಿಕೆ
- 13 ಜಿಲ್ಲೆಗಳಿಗೆ ಎಚ್ಚರಿಕೆ ಘೋಷಣೆ, ಬೆಂಗಳೂರು ಸೇರಿದಂತೆ ಕೆಲವರೆಡೆ ಸಾಧಾರಣ ಮಳೆ
ಬೆಂಗಳೂರು (Bengaluru): ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯ (Rain Update) ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ, ಹವಮಾನ ಇಲಾಖೆ ಯೆಲ್ಲೋ ಅಲರ್ಟ್ (yellow alert) ಘೋಷಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಚಿಕ್ಕಮಗಳೂರು, ಕೊಡಗು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳ ಜನತೆ ಎಚ್ಚರದಿಂದ ಇರಬೇಕಾಗಿದೆ.
ಇದನ್ನೂ ಓದಿ: ಇಂತವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ! ಪಟ್ಟಿಯಿಂದ ಶೀಘ್ರವೇ ರದ್ದುಪಡಿಸಲು ಕ್ರಮ
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ
ರಾಜಧಾನಿ ಬೆಂಗಳೂರು ಹಾಗೂ ಮೈಸೂರು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚು ಮಳೆಯ ನಿರೀಕ್ಷೆ ಇಲ್ಲ. ಇವುಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಿನದ ಹೊತ್ತುಗಳಲ್ಲಿ ಬಿಸಿಲು ಹಾಗೂ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ: ಇಂತಹವರಿಗೆ ಪಿಂಚಣಿ ಹಣ ಬರಲ್ಲ! ಪಟ್ಟಿಯಲ್ಲಿ 23 ಲಕ್ಷ ಜನರ ಪಿಂಚಣಿ ರದ್ದು
ಕರಾವಳಿಗೆ ಆರೆಂಜ್ ಅಲರ್ಟ್ ಮುಂದುವರಿಕೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗಿದೆ. ಈ ಭಾಗಗಳಲ್ಲಿ ಇದೀಗ ರೆಡ್ ಅಲರ್ಟ್ (red alert) ಹಿಂಪಡೆಯಲಾಗಿದ್ದು, ಪ್ರಸ್ತುತ ಆರೆಂಜ್ ಅಲರ್ಟ್ (orange alert) ಘೋಷಿಸಲಾಗಿದೆ. ಈ ಜಿಲ್ಲೆಗಳ ಜನತೆಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನದಿಗಳ ಬಳಿ ಜನರು ಸಂಚರಿಸದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಾಖಲೆಗಳು ಬೇಕೇ ಬೇಕು! ಹೊಸ ರೂಲ್ಸ್
ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗುವ ನಿರೀಕ್ಷೆ
ಇದೇ ವೇಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಾಮರಾಜನಗರ, ರಾಮನಗರ ಸೇರಿದಂತೆ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲ ದಿನಗಳಲ್ಲಿ ಇಲ್ಲಿ ಹೆಚ್ಚಿನ ಮಳೆಯ ಸಂಭವ ಕಡಿಮೆಯಾಗಿರಬಹುದು.
Rain Alert in Karnataka Districts