ಬೆಂಗಳೂರು ಸೇರಿ ಕರ್ನಾಟಕ ರಾಜ್ಯದ ಹಲವೆಡೆ 5 ದಿನ ಮಳೆ ಮುನ್ಸೂಚನೆ
ಮೇ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- ಮಳೆಬರುವ ಜಿಲ್ಲೆಯ ಪಟ್ಟಿ ಹವಾಮಾನ ಇಲಾಖೆ ಬಿಡುಗಡೆ
- ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿ
- ಬೆಂಗಳೂರು ಸೇರಿದಂತೆ ಬಹು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ
ಬೆಂಗಳೂರು (Bengaluru): ಕರಾವಳಿಯ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡು ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ವರೆಗೆ ಇರುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru Rain) ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಇತರ ಭಾಗಗಳಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆಯಿದೆ.
ಅದರಲ್ಲೂ ವಿಶೇಷವಾಗಿ ಬಾಗಲಕೋಟೆ, ಗದಗ, ಧಾರವಾಡ, ಕೊಪ್ಪಳ, ಚಿಕ್ಕಮಗಳೂರು, ಬೀದರ್, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈ ಮಳೆ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತದಿಂದ ಉಂಟಾಗುತ್ತಿರುವ ಆವೃತ್ತಿಯ ಪರಿಣಾಮವಾಗಿದೆ. ಹವಾಮಾನ ಇಲಾಖೆ (IMD Alert Karnataka) ಈಗಾಗಲೇ ಜಿಲ್ಲಾವಾರು ಮುನ್ಸೂಚನೆ ನೀಡಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
Rain Alert in Karnataka till May 26







