ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗಲಿದೆ: ಹವಾಮಾನ ಇಲಾಖೆ

Story Highlights

ಕಳೆದೆರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಬಿಡುವು ನೀಡಿದ್ದ ವರುಣ ಶನಿವಾರದಿಂದ ಮತ್ತೆ ತನ್ನ ಅಟ್ಟಹಾಸ ಮೆರೆದಿದ್ದಾನೆ.

ಬೆಂಗಳೂರು (Bengaluru): ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗಲಿದೆ (Rains Update) ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ (Bengaluru Rain) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕಳೆದೆರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಬಿಡುವು ನೀಡಿದ್ದ ವರುಣ ಶನಿವಾರದಿಂದ ಮತ್ತೆ ತನ್ನ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ (Karnataka Districts) ಹಲವೆಡೆ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಭಾರೀ ಮಳೆಯಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.

ಬೆಂಗಳೂರಿನ ಕುಮಾರಸ್ವಾಮಿಲೇಔಟ್ ರಸ್ತೆ ಶನಿವಾರ ರಾತ್ರಿಯಿಂದ ಜಲಾವೃತವಾಗಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದರಿಂದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇಲೆಕ್ಟ್ರಾನಿಕ್ ಸಿಟಿ ಮತ್ತು ಸಿಲ್ಕ್ ಬೋರ್ಡ್ ರಸ್ತೆಗಳು ಮುಳುಗಡೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು ಹಲವೆಡೆ ಸಂಚಾರ ಸಮಸ್ಯೆ ಉಂಟಾಗಿದೆ.

ಸರ್ಜಾಪುರದಲ್ಲಿ ಮಳೆಗೆ ಪರಪ್ಪನ ಅಗ್ರಹಾರ ಮತ್ತು ಸರ್ಜಾಪುರ ಸಂಪರ್ಕ ರಸ್ತೆ ಜಲಾವೃತವಾಗಿತ್ತು. ನಾಗನಾಥಪುರದಲ್ಲಿ ರಸ್ತೆ ಮುಳುಗಡೆಯಾಗಿದೆ. ಮಳೆ ಬಂದಾಗಲೆಲ್ಲ ಇದೇ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆಯಿಂದಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಿಮಾನಗಳ ಹಾರಾಟ ಸ್ಥಗಿತಗೊಂಡಿತ್ತು. ಟೇಕಾಫ್ ಮತ್ತು ಲ್ಯಾಂಡಿಂಗ್‌ಗೆ ಅಡ್ಡಿಯುಂಟಾಯಿತು. ದೇಶದ ವಿವಿಧ ನಗರಗಳಿಗೆ ವಿಮಾನಗಳು ವಿಳಂಬವಾಗಿದ್ದವು. ತಾಂತ್ರಿಕ ದೋಷದಿಂದ ವಾರಣಾಸಿ-ಬೆಂಗಳೂರು ವಿಮಾನವನ್ನು (Bengaluru Varanasi Flight) ರದ್ದುಗೊಳಿಸಲಾಗಿದೆ.

Rain is expected across the state, including Bengaluru, for two more days

Related Stories